ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಕ್ಟೋಬರ್ 13ರಂದು ಬಂಧಿಸಿದೆ.

ಪುಣೆಯಲ್ಲಿರುವ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಾರ್ವಜನಿಕ ಅಧಿಕಾರಿಯೊಬ್ಬರು ಅಧಿಕೃತ ಅನುಕೂಲಗಳನ್ನು ಮಾಡಿಕೊಡುವುದಕ್ಕಾಗಿ ಅಕ್ರಮವಾಗಿ ಹಣಕ್ಕೆ ಬೇಡಿಕೆ ಇಟ್ಟು ಸ್ವೀಕರಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಅಕ್ಟೋಬರ್ 12ರಂದು ಪ್ರಕರಣ ದಾಖಲಿಸಿತ್ತು. ಈ ಅಕ್ರಮದಲ್ಲಿ ಖಾಸಗಿ ಗುತ್ತಿಗೆದಾರರು ಹಾಗೂ ಪೂರೈಕೆದಾರರೊಂದಿಗೆ ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ.

ಪುಣೆಯಲ್ಲಿ 1.73 ಕೋಟಿ ನಗದು ವಶ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ನಿರ್ದೇಶಕರ ಪುಣೆಯ ನಿವಾಸ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದ ಸಿಬಿಐ ಅಧಿಕಾರಿಗಳು 1.73 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ಇದೇ ವೇಳೆ, ಆರೋಪಿಗಳಿಗೆ ಸಂಬಂಧಿಸಿದ ಮೈಸೂರು, ಬೆಂಗಳೂರು ಮತ್ತು ದೆಹಲಿಯ ವಿವಿಧ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 50 ಲಕ್ಷ ನಗದು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಸಿಬಿಐ ತಿಳಿಸಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

13 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

19 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

2 days ago