ಗುತ್ತಿಗೆದಾರನ ಬಳಿ 2 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಲೋಕಾಯುಕ್ತ ದಾಳಿಯ ವೇಳೆ ಅಧಿಕಾರಿಯ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎನ್ನಲಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದಿರುವ ಸಹಾಯಕ ಕೃಷಿ ಅಧಿಕಾರಿ ಹೆಸರು ಶಂಕರಯ್ಯ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೃಷಿ ಅಧಿಕಾರಿ ಶಂಕರಯ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ಈ ವೇಳೆ ಶಂಕರಯ್ಯ ಬ್ಯಾಗ್ ಚೆಕ್ ಮಾಡಿದಾಗ ಬ್ಯಾಗ್ ನಲ್ಲಿ ಹದಿಮೂರು ಲಕ್ಷದ ಮೂರು ಸಾವಿರದ ಮೂರು ರೂಪಾಯಿಗಳ ಕಂತೆ ಕಂತೆ ಹಣ ಪತ್ತೆಯಾಗಿದೆ.
ಈ ವೇಳೆ ಅಧಿಕಾರಿಗಳು ಹಣ ಎಣಿಸಲು ಮಷಿನ್ ತರಿಸಿಕೊಂಡಿದ್ದಾರೆ. 2 ಲಕ್ಷ ಲಂಚ ಮುಂಗಡವಾಗಿ ಶಂಕರಯ್ಯ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ. ಕಚೇರಿಯ ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…