ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ(ಡ್ಯಾಂ) ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.
ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.
ನಾವು ರೈತರು, ನಮ್ಮ ಜೀವನ ಭೂಮಿ ತಾಯಿಯ ಮಡಿಲಿನಲ್ಲಿದೆ. ಆ ಯೋಜನೆ, ಈ ಯೋಜನೆ ಹೆಸರಲ್ಲಿ ನಮ್ಮಿಂದ ಭೂಮಿ ಕಸಿದುಕೊಂಡು ನಮ್ಮನ್ನು ಅನಾಥರನ್ನಾಗಿ ಮಾಡಬೇಡಿ. ನಮ್ಮ ಬಳಿ ಭೂಮಿ ಇದ್ರೆ ಬೆಳೆ ಬೆಳೆದು ನಾವು ತಿಂದು ಇನ್ನೊಬ್ಬರಿಗೂ ಅನ್ನ ನೀಡುತ್ತೇವೆ. ಅಂತವರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿಬೇಡಿ ಎಂದು ರೈತ ಗೋವಿಂದರಾಜು ಆಗ್ರಹಿಸಿದ್ದಾರೆ.
ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣ ಮಾಡಿದರೆ ಡ್ಯಾಂನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ ಎಂದು ನರಸಿಂಹಮೂರ್ತಿ ಹೇಳಿದರು.
ಐದು ಗ್ರಾಮಗಳ (ಗರಡಗಲ್ಲು, ಮಚ್ಚೇನಹಳ್ಳಿ, ಲಕ್ಕೇನಹಳ್ಳಿ, ಕನಕೇನಹಳ್ಳಿ, ಸಾಸಲು) ಜಮೀನುಗಳಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಪೈಪ್ ಲೈನ್ ನಡೆದಿರುವ ಜಾಗಕ್ಕೆ ಸರ್ಕಾರದಿಂದ ಒಂದು ಗುಂಟೆಗೆ 1 ಲಕ್ಷದ 43 ಸಾವಿರ ರೂ. ಪರಿಹಾರ ನೀಡಬೇಕೆಂದು ಆದೇಶವಿದೆ. ಆದರೆ. ರೈತರಿಗೆ ಕೇವಲ 83 ಸಾವಿರ ರೂ. ಮಾತ್ರ ನೀಡಿ ಮಿಕ್ಕುಳಿದ ಹಣವನ್ನು ಮಧ್ಯವರ್ತಿಗಳು ಲಪಟಾಯಿಸುತ್ತಿದ್ದಾರೆ ಎಂದರು.
ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.
ಎತ್ತಿನಹೊಳೆ ಡ್ಯಾಂನಲ್ಲಿ ಹರಿಯುವುದು ಬೆಂಗಳೂರಿನ ಚರಂಡಿ ನೀರು ಹೊರೆತು, ಶುದ್ಧ ನೀರಲ್ಲ. ಈ ಯೋಜನೆ ಬರೀ ಹಣ ಲಪಟಾಯಿಸಕ್ಕೆ ಮಾತ್ರ ರೂಪಿಸಲಾಗಿದೆ. ರೈತರಿಗೆ, ಸಾರ್ವಜನಕರಿಗೆ ಉಪಯೋಗವಿಲ್ಲ ಎಂದರು.
ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.
ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.
ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…