ಲಕ್ಕೇನಹಳ್ಳಿ ಡ್ಯಾಂ ನಿರ್ಮಾಣ- 2.45 ಟಿಎಂಸಿ ನೀರು ಶೇಖರಣೆ- 7 ಗ್ರಾಮ ಸಂಪೂರ್ಣ ಮುಳುಗಡೆ- 2,673 ಎಕರೆ ಫಲವತ್ತಾದ ಜಮೀನು ನಾಶ- ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ- ರೈತರ ಆಕ್ರೋಶ

ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಉದ್ದೇಶಿತ ಜಲಾಶಯ(ಡ್ಯಾಂ) ನಿರ್ಮಾಣ ಕಾಮಗಾರಿ ಬಹಳ ಬರದಿಂದ ಸಾಗುತ್ತಿದೆ. ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣವಾದರೆ ಡ್ಯಾಂ ಸುತ್ತಾಮುತ್ತ ಇರುವ ಕೆಲವೊಂದು ಹಳ್ಳಿಗಳು ಮುಳುಗಡೆಯಾಗುತ್ತವೆ. ಮುಳುಗಡೆಯಾಗುವ ಹಳ್ಳಿಗಳಲ್ಲಿ ಜನರು ವಾಸ ಮಾಡಲು ಆಗುವುದಿಲ್ಲ. ಆದ್ದರಿಂದ ಈ ಹಳ್ಳಿಗಳ ಜನರಿಗಾಗಿ ಪರ್ಯಾಯವಾಗಿ ಹೊಸ ಹಳ್ಳಿ‌ ಸೃಷ್ಟಿ ಮಾಡಿ ಮನೆ, ಜಮೀನು ನೀಡುತ್ತೇವೆ. ಇದಕ್ಕೆ ಎಲ್ಲರು ಸಹಕರಿಸಬೇಕೆಂದು ಸರ್ಕಾರ ತಿಳಿಸಿದೆ.

ಸರ್ಕಾರದ ಈ ನಿರ್ಧಾರಕ್ಕೆ ಇಲ್ಲಿನ ರೈತರು, ನಿವಾಸಿಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಮಗೆ ಸರ್ಕಾರ ನೀಡುವ ಅಂಗೈ ಅಗಲ ಭೂಮಿ, ಮನೆ ಬೇಡ, ನಮ್ಮ ನಮ್ಮ ಹಳ್ಳಿಗಳಲ್ಲೇ ನಾವು ವಾಸ ಮಾಡುತ್ತೇವೆ. ನಮ್ಮ ಜಮೀನಿನಲ್ಲೇ ಉತ್ತಿಬಿತ್ತು ಬೆಳೆಬೆಳೆದು ಜೀವನ ಸಾಗಿಸುತ್ತೇವೆ. ನಾವು ಹುಟ್ಟಿ ಬೆಳೆದ ಜಾಗವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ಒಕ್ಕೊರಲಿನಿಂದ ಹೇಳಿದ್ದಾರೆ.

ನಾವು ರೈತರು, ನಮ್ಮ ಜೀವನ ಭೂಮಿ ತಾಯಿಯ‌ ಮಡಿಲಿನಲ್ಲಿದೆ. ಆ ಯೋಜನೆ, ಈ ಯೋಜನೆ ಹೆಸರಲ್ಲಿ ನಮ್ಮಿಂದ ಭೂಮಿ ಕಸಿದುಕೊಂಡು ನಮ್ಮನ್ನು ಅನಾಥರನ್ನಾಗಿ ಮಾಡಬೇಡಿ. ನಮ್ಮ ಬಳಿ ಭೂಮಿ ಇದ್ರೆ ಬೆಳೆ ಬೆಳೆದು ನಾವು ತಿಂದು ಇನ್ನೊಬ್ಬರಿಗೂ ಅನ್ನ ನೀಡುತ್ತೇವೆ. ಅಂತವರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿಬೇಡಿ ಎಂದು ರೈತ ಗೋವಿಂದರಾಜು ಆಗ್ರಹಿಸಿದ್ದಾರೆ.

ಲಕ್ಕೇನಹಳ್ಳಿಯಲ್ಲಿ ಡ್ಯಾಂ ನಿರ್ಮಾಣ ಮಾಡಿದರೆ ಡ್ಯಾಂ‌ನಲ್ಲಿ ಸುಮಾರು 2.45 ಟಿಎಂಸಿ ನೀರು ಶೇಖರಣೆಯಾಗುತ್ತದೆ. 7 ಗ್ರಾಮಗಳು(ಶ್ರೀರಾಮನಹಳ್ಳಿ, ದಾಸರಪಾಳ್ಯ, ಶಿಂಗೇನಗಳ್ಳಿ, ಗಾಣದಾಳು, ಹನುಮಂತಯ್ಯನಪಾಳ್ಯ, ನರಸಾಪುರ, ಲಕ್ಕೇನಹಳ್ಳಿ) ಸಂಪೂರ್ಣ ಮುಳುಗಡೆಯಾಗುತ್ತವೆ. ಸುಮಾರು 2,673 ಎಕರೆ ಫಲವತ್ತಾದ ಜಮೀನು ನಾಶವಾಗುತ್ತದೆ ಎಂದು ನರಸಿಂಹಮೂರ್ತಿ ಹೇಳಿದರು.

ಐದು ಗ್ರಾಮಗಳ (ಗರಡಗಲ್ಲು, ಮಚ್ಚೇನಹಳ್ಳಿ, ಲಕ್ಕೇನಹಳ್ಳಿ, ಕನಕೇನಹಳ್ಳಿ, ಸಾಸಲು) ಜಮೀನುಗಳಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಪೈಪ್ ಲೈನ್ ನಡೆದಿರುವ ಜಾಗಕ್ಕೆ ಸರ್ಕಾರದಿಂದ ಒಂದು ಗುಂಟೆಗೆ 1 ಲಕ್ಷದ 43 ಸಾವಿರ ರೂ. ಪರಿಹಾರ ನೀಡಬೇಕೆಂದು ಆದೇಶವಿದೆ. ಆದರೆ. ರೈತರಿಗೆ ಕೇವಲ 83 ಸಾವಿರ ರೂ. ಮಾತ್ರ ನೀಡಿ‌ ಮಿಕ್ಕುಳಿದ ಹಣವನ್ನು ಮಧ್ಯವರ್ತಿಗಳು ಲಪಟಾಯಿಸುತ್ತಿದ್ದಾರೆ ಎಂದರು.

ಸಾಸಲು ಹೋಬಳಿಯಲ್ಲಿ ಸುಮಾರು 1,200 ಎಕರೆಯಲ್ಲಿ ಅಡಿಕೆ ಬೆಳೆಯನ್ನು ಬೆಳೆಯಲಾಗುತ್ತದೆ. 1, 400 ಎಕರೆಯಲ್ಲಿ ತರಕಾರಿ, ಜೋಳ, ರಾಗಿ ಸೇರಿದಂತೆ ಇತರೆ  ಬೆಳೆಗಳನ್ನು ಬೆಳೆಯಲಾಗುತ್ತದೆ. ವಾರ್ಷಿಕವಾಗಿ 20 ಕೋಟಿಗೂ ಹೆಚ್ಚು ಅಡಿಕೆ ವಹಿವಾಟು ಮಾಡಲಾಗುತ್ತದೆ. 10 ಕೋಟಿಗೂ ಹೆಚ್ಚು ರಾಗಿ, ಜೋಳ, ತರಕಾರಿ ಸೇರಿದಂತೆ ಇತರೆ ಬೆಳೆಗಳ ವಹಿವಾಟು ನಡೆಯುತ್ತದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ಕಸ ಹಾಕೋದಕ್ಕೆ ಭೂಮಿ, ಕೆಐಡಿಬಿಗೆ ಭೂಮಿ, ಡ್ಯಾಂಗೆ ಭೂಮಿ, ಕೈಗಾರಿಕೆಗೆ ಭೂಮಿ ಸೇರಿದಂತೆ ಎಲ್ಲದಕ್ಕೂ ರೈತರ ಭೂಮಿಯನ್ನು ಬಳಸಿಕೊಳ್ಳಲಾಗುತ್ತಿದೆ. ಹೀಗೆ ಪ್ರತಿಯೊಂದಕ್ಕೂ ರೈತರ ಭೂಮಿನೇ ಬೇಕು. ಹೀಗೆ ಮಾಡಿದರೆ ರೈತರ ಗತಿ ಏನಾಗಬೇಕು…? ಮುಂದುಂದು ದಿನ ಅನ್ನ ಬದಲು ಕಾಂಕ್ರೀಟ್, ಕಸ, ಮಣ್ಣು ತಿನ್ನುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಎತ್ತಿನಹೊಳೆ ಡ್ಯಾಂನಲ್ಲಿ ಹರಿಯುವುದು ಬೆಂಗಳೂರಿನ ಚರಂಡಿ ನೀರು ಹೊರೆತು, ಶುದ್ಧ ನೀರಲ್ಲ. ಈ ಯೋಜನೆ ಬರೀ ಹಣ ಲಪಟಾಯಿಸಕ್ಕೆ ಮಾತ್ರ ರೂಪಿಸಲಾಗಿದೆ.‌ ರೈತರಿಗೆ, ಸಾರ್ವಜನಕರಿಗೆ ಉಪಯೋಗವಿಲ್ಲ ಎಂದರು.

ಎತ್ತಿನಹೊಳೆ ಯೋಜನೆಗೆ ನಮ್ಮ ವಿರೋಧವಿಲ್ಲ. ಲಕ್ಕೇನಹಳ್ಳಿಯಲ್ಲಿ ಡ್ಯಾಂ‌ ನಿರ್ಮಾಣ ಮಾಡುವುದಕ್ಕೆ ನಮ್ಮ ವಿರೋಧವಿದೆ. ನಮ್ಮ ಪ್ರಾಣವಾದರೂ ಬಿಡುತ್ತೇವೆ ಡ್ಯಾಂ ನಿರ್ಮಾಣ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ಬರಡು ಭೂಮಿ ಇರುವ ಕಡೆಯಲ್ಲಿ ಜಲಾಶಯ ನಿರ್ಮಿಸಲಿ. ಇಲ್ಲಿಯೇ ಜಲಾಶಯ ನಿರ್ಮಿಸಬೇಕು ಎನ್ನುವುದಕ್ಕೆ ಇಲ್ಲಿ ಯಾವುದೇ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸುತ್ತಿಲ್ಲ. ಬದಲಿಗೆ ಎಲ್ಲಿಂದಲೋ ಪೈಪ್ ಮೂಲಕ ತರಲಾಗುತ್ತಿರುವ ನೀರು ಸಂಗ್ರಹಣೆಗೆ ಯಾವ ಸ್ಥಳದಲ್ಲಿ ಬೇಕಿದ್ದರು ಜಲಾಶಯ ನಿರ್ಮಿಸಲು ಅವಕಾಶ ಇದೆ. ಹಾಗಾಗಿ ಬರಡು ಹಾಗೂ ಸರ್ಕಾರಿ ಜಮೀನು ಹೆಚ್ಚಾಗಿ ಇರುವ ಸ್ಥಳದಲ್ಲಿ ಜಲಾಶಯ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ತಲೆತಲಾಂತರದಿಂದ ಬದುಕು ಕಟ್ಟಿಕೊಂಡು ಬಂದಿರುವ ಊರು, ಮನೆಗಳನ್ನು ತೊರೆದು ನಾವು ಎಲ್ಲಿಯೂ ಹೋಗುವುದಿಲ್ಲ. ನಮ್ಮ ಉಸಿರು ಇರುವವರೆಗೂ ಹೋರಾಟ ಮಾಡಿಯಾದರು ಸರಿ ನಮ್ಮ ಹಿರಿಯರು ಬಾಳಿ, ಬದುಕಿರುವ ಮನೆಗಳನ್ನು ಉಳಿಸಿಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ದಾಸರಪಾಳ್ಯ ರಾಮಣ್ಣ, ವಕೀಲರಾದ ನರಸಿಂಹ ಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದರಾಜ್, ಮುಖಂಡರಾದ ಲಕ್ಕಣ್ಣ, ರೈತ ಮುಖಂಡ ಸೇರಿದಂತೆ ಲಕ್ಕೇನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

59 minutes ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 hour ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

5 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಬಾಶೆಟ್ಟಿಹಳ್ಳಿಯಲ್ಲಿ ಜಾಗೃತಿ, ತಂಬಾಕು ನಿಯಂತ್ರಣ ಕಾಯ್ದೆಯಡಿ ದಂಡ

ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ…

7 hours ago

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

13 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

14 hours ago