ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಫಲವತ್ತಾದ ಕೃಷಿ ಭೂಮಿಯಲ್ಲಿ ಡ್ಯಾಂ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಒತ್ತಾಯಿಸಿದ ಶ್ರೀರಾಮನಹಳ್ಳಿ, ಸಿಂಗೇನಹಳ್ಳಿ, ಸಾಸಲು, ಲಕ್ಕೇನಹಳ್ಳಿ, ದಾಸರಪಾಳ್ಯ ಹಾಗೂ ಮಚ್ಚೇನಹಳ್ಳಿ ಗ್ರಾಮಗಳ ರೈತರು ಒಟ್ಟಾಗಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಸ್ವೀಕರಿಸಿದ ನಂತರ ಜು.23ರಂದು‌ ರೈತರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ, ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಬೇಕು ಹಾಗೂ ರೈತರ ಹಿತಾಸಕ್ತಿಗೆ ಧಕ್ಕೆಯಾಗದಂತೆ ಯೋಜನೆಯನ್ನು ಮರುಪರಿಶೀಲಿಸಬೇಕು ಎಂದು ರೈತರು ಮನವಿಯಲ್ಲಿ ಆಗ್ರಹಿಸಿದರು.

ಮನವಿ ಸಲ್ಲಿಸುವ ವೇಳೆ ವಕೀಲ ನರಸಿಂಹಗೌಡ, ರಾಮಣ್ಣ, ಅಶ್ವತ್ಥ್ ನಾರಾಯಣ, ಗೋವಿಂದರಾಜು, ಕೆಂಪರಾಜು, ರಾಜಣ್ಣ, ಸಿದ್ದಲಿಂಗಾಚಾರ್, ವಿನಯ್, ಕುಮಾರ್, ಗಿರೀಶ್, ಲಕ್ಷ್ಮೀನಾರಾಯಣ್, ನರಸಿಂಹಮೂರ್ತಿ, ನಾಗರಾಜು, ಹನುಮಂತಯ್ಯ ಸೇರಿದಂತೆ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

5 minutes ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

12 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

18 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

18 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago