ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟಲಿಜೆನ್ಸ್ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಲೇಷ್ಯಾದ ಕೌಲಾಲಂಪುರದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ಪ್ರಯಾಣಿಕರು ಚಿನ್ನದ ಬಿಸ್ಕೆಟ್‌ಗಳನ್ನು ಲಗೇಜ್ ಟ್ರಾಲಿಗೆ ಅಂಟಿಸಿ ಸಾಗಿಸಲು ಯತ್ನಿಸಿದ್ದರು.

ಈ ಕುರಿತು ಮಾಹಿತಿ ಪಡೆದ DRI ವಲಯ ಘಟಕದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 1.2 ಕೆ.ಜಿ.ಯಿಂದ 1.3 ಕೆ.ಜಿ. ತೂಕದ 12 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 1.79 ಕೋಟಿ ಎಂದು ಅಂದಾಜಿಸಲಾಗಿದೆ.

ಪ್ರಯಾಣಿಕರಿಗೆ ಅರಿವಿಲ್ಲದ ರೀತಿಯಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಿಸಲಾಗುತ್ತಿತ್ತು ಎಂಬ ಅಂಶವೂ ತನಿಖೆಯಲ್ಲಿ ಪರಿಶೀಲಿಸಲಾಗುತ್ತಿದೆ.

ಈ ಸಂಬಂಧ DRI ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ಚಿನ್ನದ ಮೂಲ ಹಾಗೂ ಸಾಗಾಟದ ಹಿಂದಿರುವ ಜಾಲದ ಕುರಿತು ತನಿಖೆ ಮುಂದುವರಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ…

6 hours ago

ದೀಪಾವಳಿ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಹಸಿರು ಪಟಾಕಿ ಬಳಕೆ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ಗೋದಾಮು ಮುಟ್ಟುಗೋಲು, ಕ್ರಿಮಿನಲ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ…

6 hours ago

68 ಎಕರೆಗೂ ಅಧಿಕ ಸರ್ಕಾರಿ ಜಮೀನಿನ ಅಕ್ರಮ ಖಾತೆ ಬದಲಾವಣೆ ಆರೋಪ: ಹಿಂದಿನ ಎಸಿ ದುರ್ಗಶ್ರೀ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ 68 ಎಕರೆ 35 ಗುಂಟೆಗೂ ಅಧಿಕ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ಒಟ್ಟು 71 ಸಾಧಕರನ್ನು…

20 hours ago

ಕೆ.ಜಿ.ಎಫ್‌ನ 28 ವರ್ಷದ ಯುವತಿ ಮೆದುಳು ನಿಷ್ಕ್ರಿಯ; ಯಕೃತ್ ಹಾಗೂ ಹೃದಯದ ಕವಾಟಗಳ ದಾನ

ಕೋಲಾರ: ಮಗಳ ಅಗಲಿಕೆಯ ದುಃಖದ ನಡುವೆಯೂ ಮಾನವೀಯತೆ ಮೆರೆದ ಕುಟುಂಬವೊಂದು ಅಂಗಾಂಗ ದಾನಕ್ಕೆ ಮುಂದಾಗುವ ಮೂಲಕ ಇಬ್ಬರು ರೋಗಿಗಳ ಬದುಕಿನಲ್ಲಿ…

1 day ago

ರಾಜ್ಯದಲ್ಲಿ 1,000 ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸರ್ಕಾರದ ಯೋಜನೆ: ಗ್ರಾಮೀಣ ಬಸ್ ತಂಗುದಾಣಗಳಿಗೆ ಬೇಕಿದೆ ಮರುಜೀವ!:

ಗ್ರಾಮೀಣ ಭಾಗದ ಜನರಿಗೆ ಸಾರ್ವಜನಿಕ ಸಾರಿಗೆಯೇ ಪ್ರಮುಖ ಸಂಚಾರದ ಆಸರೆ. ಉದ್ಯೋಗ, ಕೃಷಿ ಚಟುವಟಿಕೆ, ವ್ಯಾಪಾರ, ಶಿಕ್ಷಣ ಹಾಗೂ ಆರೋಗ್ಯ…

1 day ago