ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್ 13 ರಿಂದ ಆರಂಭ. ಇದಕ್ಕೆ ಜೂನ್ 13 ರಂದೇ ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…