ಲಘು ವಾಹನ ಚಾಲನೆ ಕುರಿತ ಉಚಿತ ತರಬೇತಿಗೆ ಜೂ.13ರಂದು ನೇರ ಸಂದರ್ಶನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಲಘು ವಾಹನ ಚಾಲನೆ ಕುರಿತ 30 ದಿನಗಳ ಉಚಿತ ತರಬೇತಿಯು ಜೂನ್‌ 13 ರಿಂದ ಆರಂಭ. ಇದಕ್ಕೆ ಜೂನ್‌ 13 ರಂದೇ ಬೆಳಿಗ್ಗೆ 9.30 ರಿಂದ ನೇರ ಸಂದರ್ಶನ ನಡೆಯಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

9 minutes ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

6 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

6 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

13 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

1 day ago