ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂದು ಪಿಎಂಸಿಸಿ ಬಿ.ಎಸ್. ರಾಜಶೇಖರಯ್ಯ ಹೇಳಿದರು.

ತಾಲೂಕಿನ ಕೊನಘಟ್ಟ ಗ್ರಾಮದ ಮಹಾಲಕ್ಷ್ಮಿ ಫ್ಯೂಯೆಲ್ ಸ್ಟೇಷನ್ ಸಮೀಪ ನಡೆದ ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಆಯ್ಕೆ ಸಮಾರಂಭದಲ್ಲಿ ಅವರು ಮಾತನಾಡಿ, ಜನರ ಸೇವೆಗೆ ಸದಾ ಸನ್ನದ್ಧರಾಗಿರಬೇಕು. ಲಯನ್ಸ್ ಕ್ಲಬ್‌ನಂತಹ ಸಂಘಟನೆಗಳ ಮೂಲಕ ಸೇವೆ ಸಲ್ಲಿಸುವುದು ಸಮಾಜಕ್ಕೆ ಮಾದರಿಯಾಗಲಿದೆ ಎಂದು ತಿಳಿಸಿದರು.

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷ ಜಿ. ಲಕ್ಷ್ಮಿಪತಿ ಮಾತನಾಡಿ, ಕ್ಲಬ್ ವತಿಯಿಂದ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ ಸೇರಿದಂತೆ ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು.

ಕೊನಘಟ್ಟ ಲಯನ್ಸ್ ಕ್ಲಬ್ ಸ್ಥಾಪನೆಯಾಗಿ ಒಂದು ವರ್ಷ ಪೂರ್ಣಗೊಂಡು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಹಿಂದಿನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನೇ ಮರುನೇಮಕ ಮಾಡಲಾಗಿದೆ. ಕ್ಲಬ್‌ನಲ್ಲಿ ಉತ್ತಮ ತಂಡವಿದ್ದು, ಲಯನ್ಸ್ ಕ್ಲಬ್‌ನ ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ಇನ್ನಷ್ಟು ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ 2,000 ಮಕ್ಕಳಿಗೆ ಭಾರತ ಸೇವಾದಳದ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸುವ ಯೋಜನೆ ರೂಪಿಸಲಾಗಿದ್ದು, ಅದರ ಅಂಗವಾಗಿ ಬಡ ಕುಟುಂಬಗಳಿಗೆ ಸಾಂಕೇತಿಕವಾಗಿ ಹೊದಿಕೆಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಲಬ್‌ನ ಜಿಲ್ಲಾ ಆಡಳಿತಗಾರ ಎಂ.ಆರ್. ಶ್ರೀನಿವಾಸ್, ಆರ್. ರವಿಚಂದ್ರನ್, ಜೆ.ಆರ್. ರಾಕೇಶ್, ಡಾ. ಎಂ. ಶ್ರೀನಿವಾಸ್ ರೆಡ್ಡಿ, ಕೆ.ಆರ್. ರವಿಕಿರಣ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂತ್ಯದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಶುಭ ಹಾರೈಸಲಾಯಿತು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

8 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

11 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

13 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago