ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್  ಮತ್ತು ಗೈಡ್ ಸಹಯೋಗದಲ್ಲಿ ಜಾನಪದ ಗೀತಾ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರುಗಳಾದ ಎಂ.ಕವಿತಾ, ಟಿ.ಸಿ.ಹರ್ಷಿತಾ, ಕೆ.ಯು.ಹರ್ಷಿತಾ, ಬಿ.ಎಂ.ವರ್ಷಿಣಿ, ವಿ.ನಾಗವೇಣಿ, ಎನ್.ಕಾವ್ಯಶ್ರೀ ಅವರನ್ನು ಅಭಿನಂದಿಸಿ ಮಾತನಾಡಿದರು.

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವ ಬಿಟ್ಟು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಧೈರ್ಯ ತೋರಬೇಕು. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು ಮಾತನಾಡಿ,   ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾಗಿ ಆಗಿ ಮಹತ್ವದ ಸೇವೆ ಸಲ್ಲಿಸಿದವರು ಎಂದರು.

ಗೊ.ರು.ಚನ್ನಬಸಪ್ಪ ಅವರು  ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಹಲವಾರು ನೃತ್ಯ ಗೀತೆಗಳನ್ನು ರಚಿಸಿದ್ದಾರೆ. ಜಾನಪದ ವಿದ್ವಾಂಸರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆಯನ್ನು ಗೊ.ರು.ಚನ್ನಬಸಪ್ಪ ಸಲ್ಲಿಸಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ,  ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ.  ಜಾನಪದ ಸಾಹಿತ್ಯದಲ್ಲಿ ಬದುಕಿನ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿದೆ. ಜಾನಪದ ಎಂಬುದು ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳಾದ ಪ್ರೊ.ನಂಜಪ್ಪ, ಪ್ರೊ.ಸುಷ್ಮಾ, ಪ್ರೊ.ಭಾರತಿ, ಪ್ರೊ.ದಿವ್ಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

6 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

6 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

11 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

23 hours ago