ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.
ಕವನಾ (20) ತಂದೆಯಿಂದಲೇ ಹತ್ಯೆಯಾದ ಮೃತ ದುರ್ದೈವಿ. ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸರಿಗೆ ಬಂದು ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಂಜುನಾಥ್ ಗೆ ಮೂವರು ಹೆಣ್ಣು ಮಕ್ಕಳು ಇರುತ್ತಾರೆ. ಕಿರಿಯ ಮಗಳ ಪ್ರೀತಿ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು, ಪ್ರೀತಿಸಿದವನ ಜೊತೆ ಹೋಗುವುದಾಗಿ ಕಿರಿಮಗಳು ಠಾಣೆಯಲ್ಲಿ ಪಟ್ಟು ಹಿಡಿದಿದ್ದಳು, ಇದರಿಂದ ಮನನೊಂದಿದ್ದ ತಂದೆ.
ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಎರಡನೇ ಮಗಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ತಡರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.
ಕೊಲೆಯಾದ ಮಗಳಿಗೆ ಮದುವೆ ಫಿಕ್ಸ್ ಆಗಿ ಮುರಿದು ಹೋಗಿತ್ತು, ಮದುವೆ ಮುರಿದು ಹೋಗಲು ಕಾರಣ ಕವನಾನೇ ಕಾರಣವಾಗಿದ್ದರಿಂದ ತಂದೆ ಬೇಸತ್ತಿದ್ದ. ಇದಾದ ಬಳಿಕ ಕವನಾ ಪೋಷಕರ ಮುಂದೆಯೇ ಪ್ರಿಯಕರನ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನ ನೋಡಿದ ತಂದೆ ತಾನೇ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದನಂತೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…