ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ತಿಳಿಸಿದರು.
ಮಳೆ ಹೆಚ್ಚು ಕಡಿಮೆ ಆಗಲು ಎಲಿನಿನೊ ಹಾಗೂ ಲಾನಿನೊ ಕಾರಣ
ವಾಡಿಕೆಗಿಂತ ಹೆಚ್ಚು – ಕಡಿಮೆ ಮಳೆ ಬೀಳುವುದಕ್ಕೆ ಎಲಿನಿನೊ ಎಫೆಕ್ಟ್ ಹಾಗೂ ಲಾನಿನೊ ಎಫೆಕ್ಟ್ ಕಾರಣ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಎಲಿನಿನೊ ಪರಿಣಾಮದಿಂದ ಮಳೆ ಹೆಚ್ಚು ಬೀಳುತ್ತದೆ, ಲಾನಿನೊ ಪರಿಣಾಮದಿಂದ ಕಡಿಮೆ ಮಳೆ ಆಗುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಮಹಾ ಸಾಗರಗಳಲ್ಲಿ ಹವಾಮಾನ ವೈಪರೀತ್ಯ ಉಂಟಾದಾಗ ಮಳೆ ಹೆಚ್ಚು, ಕಡಿಮೆ ಆಗುತ್ತದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಎಲಿನಿನೊ ಪರಿಣಾಮ ಇರುತ್ತದೆ. ನಂತರ ಲಾನಿನೊ ಪರಿಣಾಮ ಅಸ್ತಿತ್ವಕ್ಕೆ ಬರುತ್ತದೆ.
ಲಾನಿನೊ ಪರಿಣಾಮದಿಂದ ವಾಡಿಕೆಗಿಂತ ಕಡಿಮೆ ಮಳೆ
ಮಹಾ ಸಾಗರಗಳಲ್ಲಿ ತಾಪಮಾನ ಹೆಚ್ಚಾದಾಗ ಆ ಬಿಸಿಯನ್ನು ಏಷ್ಯಾ ಖಂಡಕ್ಕೆ ತಳ್ಳಿದಾಗ ಎಲಿನಿನೊ ಪರಿಣಾಮ ಉಂಟಾಗಿ ಕಾಲಕಾಲಕ್ಕೆ ಭಾರತದಲ್ಲಿ ಮಳೆ ಆಗುತ್ತದೆ. ನಾಲ್ಕು ವರ್ಷಗಳ ನಂತರ ಈಗ ಲಾನಿನೊ ಪರಿಣಾಮ ಆರಂಭವಾಗಿದೆ. ಲಾನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ಅಮೆರಿಕ, ಯೂರೋಪ್ ಪ್ರದೇಶಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ವಿಜ್ಞಾನಿಗಳು ಸೂಚಿಸಿದ್ದಾರೆ.
ಹವಾಮಾನಕ್ಕೆ ತಕ್ಕ ಬೆಳೆ ಆಯ್ಕೆ ಸೂಕ್ತ
ಬರಗಾಲದ ಮುನ್ಸೂಚನೆ ಇರುವುದರಿಂದ ರೈತರು ಹವಾಮಾನಕ್ಕೆ ತಕ್ಕಂತೆ ಬೆಳೆಗಳು ಆಯ್ಕೆ ಮಾಡಿ ಬೆಳೆಯುವುದು ಉತ್ತಮ ಎಂದು ತಿಳಿಸಿದ್ದಾರೆ.
ರೈತರು ಯಾವುದೇ ಬೆಳೆ ಬೆಳೆಯುದಕ್ಕಿಂತ ಮೊದಲು ಹತ್ತಿರದ ಕೃಷಿ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೆಳೆ ಬೆಳೆಯುದಕ್ಕೆ ಮುಂದಾಗಬೇಕು, ಮಳೆ ಮುನ್ಸೂಚನೆ, ಮಣ್ಣಿನ ಪರೀಕ್ಷೆ, ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬಹುದು, ಸಾವಯವ ಕೃಷಿಯನ್ನ ಹೇಗೆ ಮಾಡೋದು, ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ಪಡೆಯುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನು ಕೃಷಿ ವಿಜ್ಞಾನಿಗಳಿಂದ ಸಲಹೆ ಪಡೆದು ಬೇಸಾಯ ಮಾಡಿದರೆ ರೈತರು ಕೃಷಿಯಲ್ಲಿ ನಷ್ಟಕ್ಕೆ ಒಳಗಾಗುವುದಿಲ್ಲ ಎಂದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…