
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ.
ಕಾರು ದೊಡ್ಡಬಳ್ಳಾಪುರದಿಂದ ನೆಲಮಂಗಲದ ಕಡೆಗೆ ತೆರಳುತ್ತಿತ್ತು. ಇದೇ ವೇಳೆ ಲಾರಿ ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಬರುತ್ತಿದ್ದಾಗ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

ಈ ಪ್ರದೇಶದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಅಪಘಾತದ ಹಾಟ್‌ಸ್ಪಾಟ್ ಎಂಬ ಆತಂಕ ಸ್ಥಳೀಯರಲ್ಲಿ ಮೂಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.