
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ.
ಬೆಂಗಳೂರು ಮೂಲದ ರವಿಚಂದ್ರ (40), ಸಂತೋಷ್ (25) ಮೃತ ದುರ್ದೈವಿಗಳು.
ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ..ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..