ದೊಡ್ಡಬಳ್ಳಾಪುರ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು 17 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ಮುಂಭಾಗದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ಸಂಜಯ್ ನಗರದ ವೆಂಕಟೇಶ್ (17), ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಕೊಂಗಾಡಿಯಪ್ಪ ರಸ್ತೆ ಮಾರುಕಟ್ಟೆಯಂತಾಗಿದೆ, ರಸ್ತೆ ಬದಿಯಲ್ಲಿ ತರಕಾರಿ ಅಂಗಡಿಗಳು ಸೇರಿದಂತೆ ಸಾಕಷ್ಟು ಅಂಗಡಿಗಳು ತಲೆ ಎತ್ತಿವೆ, ಬೆಳಗ್ಗೆ ಮತ್ತು ಸಂಜೆಯ ಸಮಯದಲ್ಲಿ ವಾಹನಗಳ ದಟ್ಟನೆಯುಂಟಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ, ಜನದಟ್ಟಣೆಯ ಪ್ರದೇಶದಲ್ಲಿ ಅತಿವೇಗವಾಗಿ ಬರುವ ವಾಹನಗಳಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…