ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ವೀರದಿಪ್ಪಯ್ಯ ಆಯ್ಕೆ

ತಾಲೂಕಿನ ಲಿಂಗದವೀರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ವೀರದಿಪ್ಪಯ್ಯ.

ಚುನಾವಣಾಧಿಕಾರಿ ಮಾಧವರೆಡ್ಡಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 11 ಸದಸ್ಯರ ಪೈಕಿ 9 ಮಂದಿ ಸದಸ್ಯರು ‌ವೀರದಿಪ್ಪಯ್ಯ ಅವರಿಗೆ ಮತ ಹಾಕುವುದರ‌ ಮೂಲಕ ಗೆಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ವೀರದಿಪ್ಪಯ್ಯ ಹಾಗೂ ರಾಮಕೃಷ್ಣಪ್ಪ ಅವರು ಉಮೇದುವಾರಿಕೆ ಸಲ್ಲಿಸಿದ್ದರು‌ ಇವರಲ್ಲಿ ವೀರದಿಪ್ಪಯ್ಯ ಹೆಚ್ಚು ಬಹುಮತ ಪಡೆದು ಅಧ್ಯಕ್ಷ ಪಟ್ಟ ಗಿಟ್ಟಿಸಿಕೊಂಡಿದ್ದು, ರಾಮಕೃಷ್ಣಪ್ಪನವರಿಗೆ ಕೇವಲ 2 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ಭರ್ಜರಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ವೀರದಿಪ್ಪಯ್ಯ ಅವರಿಗೆ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿದರು.

ನಂತರ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ನೂತನ ಅಧ್ಯಕ್ಷ ವೀರದಿಪ್ಪಯ್ಯ ಮಾತನಾಡಿ, ನನಗೆ ಮತ ನೀಡಿ ಗೆಲ್ಲಿಸಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸುತ್ತೇನೆ, ಸಂಘದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಶ್ರಮವಹಿಸುತ್ತೇನೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವಂತ ಕಟ್ಟಡವಿಲ್ಲ ಆದ್ದರಿಂದ ಕೂಡಲೇ ಜಾಗ ಗುರುತಿಸಿ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುವೆ ಎಂದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

14 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago