ಲೋಕಸಭಾ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡೋಣ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ದೈನಂದಿನ ಕಚೇರಿ ಕಾರ್ಯಗಳ ಜೊತೆಗೆ ಚುನಾವಣಾ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಿ, ಚುನಾವಣೆ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ .ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆಯು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಗೆ ಯಾವುದೇ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಬಹುದು. ಆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಪೂರ್ವ ಸಿದ್ಧತೆಗಳನ್ನು ಇಂದಿನಿಂದಲೆ ಮಾಡಿಕೊಳ್ಳಬೇಕು ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವ ತಯಾರಿ ಕಾರ್ಯಗಳನ್ನು ಚಾಚುತಪ್ಪದೆ ಜಿಲ್ಲೆಯಲ್ಲಿ ಪ್ರಾರಂಭ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿಗಳ ನಿಯೋಜನೆ, ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ, ಭದ್ರತೆ, ಪೊಲೀಸ್ ಬಂದೋಬಸ್ತ್, ಚೆಕ್ ಪೋಸ್ಟ್ ನಿರ್ಮಾಣ, ಚುನಾವಣಾ ಲಿಪಿಕ ಪರಿಕರಗಳು ಹಾಗೂ ಇತರ ವಸ್ತುಗಳ ಖರೀದಿ, ಸಾರಿಗೆ ವ್ಯವಸ್ಥೆ, 24*7 ಕಂಟ್ರೋಲ್ ರೂಂ ತೆರೆಯಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವವರಿಗೆ ಒಂದು ಸುತ್ತಿನ ತರಬೇತಿ ಸೇರಿದಂತೆ ಇನ್ನಿತರ ಸಕಲ ತಯಾರಿಗಳನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಚುನಾವಣಾ ಕರ್ತವ್ಯಕ್ಕಾಗಿ 21 ವಿಷಯಗಳಿಗೆ 21 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ಆಯೋಗದ ಪ್ರಸ್ತುತದ ನಿರ್ದೇಶನಗಳನ್ವಯ ಕರಾರುವಕ್ಕಾಗಿ ಕಾರ್ಯನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆಯ ಅಧಿಸೂಚನೆ ಪ್ರಕಟದ ದಿನಾಂಕದಿಂದ ಚುನಾವಣೆ ಫಲಿತಾಂಶದ ನಂತರವೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಅನುಮತಿ ಇಲ್ಲದೆ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭಗಳು ಏರ್ಪಡದಂತೆ ನೋಡಿಕೊಳ್ಳಬೇಕು. ಅನಿವಾರ್ಯತೆ ಎಂಬ ಕಾರ್ಯಕ್ರಮಗಳಿಗೆ ಪೊಲೀಸ್ ಅಧಿಕಾರಿಗಳ ಅನುಮತಿ ಕಡ್ಡಾಯವಾಗಿರಬೇಕು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಜಾಹೀರಾತು ಪ್ರಕಟಿಸಲು ಸರಕಾರಿ ಮತ್ತು ಅನುದಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ ನಿಗಾವಹಿಸಬೇಕು ಎಂದು ಹೇಳಿದರು.

ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಸರ್ಕಾದ ಅಧೀನದಲ್ಲಿರುವ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಾ ರೀತಿಯ ಪ್ರಚಾರ ಫಲಕಗಳಲ್ಲಿನ ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಚುನಾವಣಾ ಸಭೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಕ್ಷಮದ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು. ಚುನಾವಣೆ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಿ, ಒಟ್ಟಾಗಿ ಕೆಲಸ ಮಾಡೋಣ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago