ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ವಿಚಾರ: ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು- ಸಿಎಂ‌ ಸಿದ್ದರಾಮಯ್ಯ ಆಗ್ರಹ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದರು.

ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ‌ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 16 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.

Ramesh Babu

Journalist

Recent Posts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

3 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

16 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

22 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

23 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 day ago