ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದರು.
ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 16 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…