ಲೋಕಸಭಾ ಚುನಾವಣೆ- ಅಧಿಕಾರಿಗಳ ಸಮನ್ವಯತೆ, ಸಹಕಾರ ಅತ್ಯಗತ್ಯ- ಪಿ.ಎನ್ ರವೀಂದ್ರ

ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಕುರಿತ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 08 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಚಿಕ್ಕಬಳ್ಳಾಪುರ ಜಿಲ್ಲೆಯ 3 ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕು ಹಾಗೂ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಕ್ಷೇತ್ರ ಬರುತ್ತದೆ. ಈ 8 ಕ್ಷೇತ್ರಗಳಿಗೆ ಚಿಕ್ಕಬಳ್ಳಾಪುರ ಕೇಂದ್ರ ಸ್ಥಾನವಾಗಿದೆ. ಹೀಗಾಗಿ ಇಂದಿನ ಸಭೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕು ಹಾಗೂ ಯಲಹಂಕ ಕ್ಷೇತ್ರದ ಚುನಾವಣೆ ಅಧಿಕಾರಿಗಳ ಸಹಕಾರ ಸಭೆ ಇದಾಗಿದ್ದು. ಚುನಾವಣೆ ಯಶಸ್ವಿಯಾಗಿ ನಡೆಯಲು ನಿಮ್ಮೆಲ್ಲರ ಸಹಕಾರ ಅಗತ್ಯ, ಎಲ್ಲರು ಜೊತೆಯಾಗಿ ಕೆಲಸ ಮಾಡೋಣ ಎಂದರು.

ಚುನಾವಣೆಗೆ ಈಗಾಗಲೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳು ಪ್ರತಿಯೊಂದು ಮತಗಟ್ಟೆಯ ಸ್ಥಿತಿಗತಿ ಪರಿಶೀಲಿಸಿ, ಎಲ್ಲಾ ಮತಗಟ್ಟೆಗಳ ಮಾಹಿತಿ ಪಡೆದಿರಬೇಕು. ಮತದಾರರ ಪಟ್ಟಿ, ಮತಗಟ್ಟೆಗಳ ವಿವರ ಕರ್ತವ್ಯ ನಿರತ ಅಧಿಕಾರಿಗಳಿಗೆ ತಿಳಿದಿರಬೇಕು. ಎಂ.ಸಿ.ಸಿ, ಎಫ್.ಎಸ್.ಟಿ, ವಿ.ವಿ.ಟಿ ಟೀಮ್, ರಿಟರ್ನಿಂಗ್ ಆಫೀಸರ್ ಗಳಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಇ.ವಿ.ಎಂ ಮಿಷನ್ಗಳ ಭದ್ರತೆ, ಚೆಕ್ ಪೋಸ್ಟ್ ಗಳ ಪರಿಶೀಲನೆ, ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ. ಸಮರ್ಪಕವಾಗಿ, ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯಲ್ಲಿ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದೇವೆ. ಅಧಿಕಾರಿಗಳಿಗೆ ವಿವಿಧ ಹಂತದಲ್ಲಿ ತರಬೇತಿ ನೀಡಲಾಗಿದೆ. ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಎಂದು ಮತ್ತೊಮ್ಮೆ ಅಧಿಕಾರಿಗಳಿಗೆ ಸೂಚಿಸಿದರು. ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ನಾವೆಲ್ಲರೂ ಸನ್ನದ್ಧರಾಗಿ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ನೆರವು ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಯ ಚುನಾವಣಾಧಿಕಾರಿಗಳು, ತಹಶೀಲ್ದಾರ್ ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಡಿವೈಎಸ್ಪಿ ಗಳು ಸೇರಿದಂತೆ ಇತರೆ ಚುನಾವಣೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

14 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

18 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

21 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago