ಲೋಕಸಭಾ ಚುನಾವಣೆ: ಮತದಾರರಲ್ಲಿ ಆತ್ಮಸ್ಥೈರ್ಯ ತುಂಬಲು ಪೊಲೀಸರಿಂದ ರೂಟ್ ಮಾರ್ಚ್

ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ಜನತೆ ಮುಕ್ತವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂಬ ಸಂದೇಶವನ್ನು ರೂಟ್ ಮಾರ್ಚ್ ಮಾಡುವ ಮೂಲಕ‌ ರವಾನಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ‌ ನಗರದ ಸೂಕ್ಷ್ಮ ಪ್ರದೇಶಗಳಾದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಿಂದ ಪ್ರಾರಂಭವಾಗಿ ಇಸ್ಲಾಂಪುರ, ಕಾಳಮ್ಮ ದೇವಸ್ಥಾನ, ಹಳೇಬಸ್ ನಿಲ್ದಾಣ, ನೆಲದಾಂಜನೇಯಸ್ವಾಮಿ ದೇವಸ್ಥಾನ, ಅಯ್ಯಪ್ಪ‌ ದೇವಸ್ಥಾನ, ಡಿಕ್ರಾಸ್, ನಗರ‌ ಠಾಣಾ ವರೆಗೆ ರೂಟ್ ಮಾರ್ಚ್ ನಡೆಸಲಾಯಿತು.

ತಾಲೂಕಿನ ಮತದಾರರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು, ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಮತದಾನದ ದಿನದಂದು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಮತದಾನ ಕೇಂದ್ರಗಳಿಗೆ ಹೋಗಿ ತಮ್ಮ ಹಕ್ಕು ಚಲಾಯಿಸಲೆಂದು ರೂಟ್ ಮಾರ್ಚ್ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ‌ ಹೇಳಿದರು.

ಜಿಲ್ಲಾದ್ಯಂತ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು‌ ಮಾಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಎಎಸ್ ಪಿ (ಅಪರಾಧ ವಿಭಾಗ) ನಾಗರಾಜು, ಡಿವೈಎಸ್ ಪಿ, ಪಿ.ರವಿ, ನಗರ‌ ಠಾಣಾ ಇನ್ಸ್ ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ, ಮಹಿಳಾ ಠಾಣಾ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ, ಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ನವೀನ್ ಕುಮಾರ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

10 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

11 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

13 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

21 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

23 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago