ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರಿಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.