2024ರ ಲೋಕಸಭೆ ಚುನಾವಣೆ ಸನಿಹ ಹಿನ್ನೆಲೆ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು.
ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಖಡಕ್ ಎಚ್ಚರಿಕೆ ನೀಡಿದರು.
ಪ್ರತಿಯೊಬ್ಬ ರೌಡಿಶೀಟರ್ ಗಳ ಚಲನವಲನಗಳ ಮೇಲೆ ಇಲಾಖೆ ಕಣ್ಣಿಟ್ಟಿರುತ್ತದೆ. ಪದೇ ಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸಿ, ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.
ಚುನಾವಣಾ ದಿನದ ಆಸುಪಾಸು ಹಾಗೂ ಚುನಾವಣೆ ನಂತರ ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಪಾಲ್ಗೊಳ್ಳವ ಕುರಿತು ಇಲಾಖೆ ಗಮನಕ್ಕೆ ಬಂದರೆ ಕಾನೂನು ಕ್ರಮವನ್ನು ಮುಲಾಜಿಲ್ಲದೆ ಕೈಗೊಳ್ಳಲಾಗುವುದು ಎಂದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…