ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರೀಲ್ 26 ರಂದು ಮತದಾನ ನಡೆಸಲು ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆಯ ದಿನದಂದು ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರೀಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರೀಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಹಾಗೂ ಜೂನ್ 03 ರ ಮಧ್ಯರಾತ್ರಿ 12.00 ಗಂಟೆಯಿಂದ ಜೂನ್4.00ರ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ/ಬಿಯರ್/ವೈನ್ ತಯಾರಿಕಾ ಡಿಸ್ಟಿಲರಿ/ಬ್ರಿವರಿ/ವೈನರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಆದೇಶಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…