ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.
ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ ಎಂದರು.
ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.
ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…