ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ- ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ನೂತನ ಕಾರ್ಯದರ್ಶಿ ಪ್ರತಾಪ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಆಯ್ಕೆಯಾದ ಹಿನ್ನೆಲೆ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಅಥವಾ ನಾಳೆ  ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ ಎಂದರು.

ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

ಇದೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ, 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಠೆಯಿಂದ ಪಕ್ಷದ ಬೆಳವಣಿಗೆಗೆ  ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ‌ ಎಂದರು.

ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಆಶಿಸಿದರು.

ಇದೆ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ), ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ, ಚಿಕ್ಕಪಿಳ್ಳಪ್ಪ, ಸುರೇಶ್, ಶರತ್, ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಇದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

3 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

15 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

17 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

19 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

20 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

21 hours ago