ಲೋಕಸಭಾ ಚುನಾವಣೆ ಘೋಷಣೆಯಾಗಿದೆ…….. ಮುಂದಿನ ಸುಮಾರು 75 ದಿನಗಳು ಸಾಕಷ್ಟು ಕುತೂಹಲ ಮತ್ತು ಸಂಘರ್ಷಮಯ ಸಾಮಾಜಿಕ ರಾಜಕೀಯ ವಾತಾವರಣ ನಿರ್ಮಾಣವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವ್ಯಕ್ತಿಗಳಾದ ನಾವು ಹೆಚ್ಚು ಜವಾಬ್ದಾರಿಯಿಂದ, ತಾಳ್ಮೆಯಿಂದ ನಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದು ವೈಯಕ್ತಿಕ ಹಾಗೂ ದೇಶದ ಹಿತಾಸಕ್ತಿಯಿಂದ ಬಹಳ ಮುಖ್ಯ…..
ರಾಜಕಾರಣಿಗಳು ಮತ್ತು ಮಾಧ್ಯಮಗಳು ತಮ್ಮ ಸ್ವಾರ್ಥ ಮತ್ತು ವ್ಯಾಪಾರದ ದೃಷ್ಟಿಯಿಂದ ಇಲ್ಲಸಲ್ಲದ ಆರೋಪಗಳನ್ನು, ದ್ವೇಷವನ್ನು, ಅಸೂಯೆಯನ್ನ ಬಹಿರಂಗವಾಗಿ ಪ್ರದರ್ಶಿಸುತ್ತಾ ಜನರನ್ನು ಪ್ರಚೋದಿಸಬಹುದು, ಉದ್ರೇಕಿಸಬಹುದು, ಆದರೆ, ನಾವುಗಳು ಆ ಮುಖವಾಡದ ಕಪಟವನ್ನು ನಿರ್ಲಕ್ಷಿಸಬೇಕು…..
ಚುನಾವಣೆ ಎಂಬುದು ಯುದ್ಧವು ಅಲ್ಲ, ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ. ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ. ಯಾರೋ ಒಬ್ಬರು ಗೆಲ್ಲುತ್ತಾರೆ ಮತ್ತೊಬ್ಬರು ಸೋಲುತ್ತಾರೆ. ಅದರಿಂದ ಅಂತಹ ದೊಡ್ಡ ವ್ಯತ್ಯಾಸವೇನು ಆಗುವುದಿಲ್ಲ…..
ಈ 75 ದಿನಗಳ ಒಂದು ಸ್ಪರ್ಧೆಗೆ ಅನಾವಶ್ಯಕವಾಗಿ ನಾವುಗಳು ಏಕೆ ಮನಸ್ತಾಪ ಮಾಡಿಕೊಳ್ಳಬೇಕು, ನಾವುಗಳು ಏಕೆ ಶತ್ರುಗಳಾಗಬೇಕು, ನಾವುಗಳು ಏಕೆ ಒಬ್ಬರಿಗೊಬ್ಬರು ನಿಂದಿಸಿಕೊಳ್ಳಬೇಕು……
ಸಮ ಚಿತ್ತದ ಸ್ಥಿತಪ್ರಜ್ಞತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಾ, ಸಂಬಂಧಗಳನ್ನು ಸಹಜವಾಗಿಯೇ ಕಾಪಾಡಿಕೊಳ್ಳಬಹುದಲ್ಲವೇ….
ಗೆಳೆತನದ ಘನತೆಯನ್ನು ಕಾಪಾಡೋಣ………
ಈ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಏನು ?ಮುಖ್ಯವಾಗಿ ಸೋಷಿಯಲ್ ಮೀಡಿಯಗಳಲ್ಲಿ ಆಕ್ಟೀವ್ ಅಗಿರುವವರು…..ಮೊದಲಿಗೆ ಈ ಟಿವಿ ಮಾಧ್ಯಮಗಳ TRP ಪ್ರೇರಿತ ವಿವೇಚನಾರಹಿತ ಪ್ರಚೋದಾತ್ಮಕ ಹೇಳಿಕೆಗಳನ್ನು ನಿರ್ಲಕ್ಷಿಸೋಣ…..
ಕುರುಕ್ಷೇತ್ರ – ಅಖಾಡ – ಯುದ್ಧ ಮುಂತಾದ ಕೆರಳಿಸುವ ಕಾರ್ಯಕ್ರಮಗಳನ್ನು ಹಾಸ್ಯಾಸ್ಪದವಾಗಿ ನೋಡೋಣ…..
ಹೌದು, ಇದು ಪ್ರಜಾಪ್ರಭುತ್ವ ಮತ್ತು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯದ ದೇಶ ನಿಜ. ಹಾಗಂತ ಹುಚ್ಚುಚ್ಚಾಗಿ ಅವಶ್ಯಕತೆ ಇಲ್ಲದಿದ್ದರೂ ಚರ್ಚೆಯ ನೆಪದಲ್ಲಿ ಕೆಟ್ಟದಾಗಿ ಪ್ರತಿಕ್ರಿಯಿಸುವುದು ಬೇಡ….
ನಾವೆಲ್ಲರೂ ಸ್ನೇಹಿತರು. ಯಾವುದೋ ಒಂದು ಪಕ್ಷದ ಬಗ್ಗೆ ಒಲವಿರಬಹುದು. ಅದರ ಅರ್ಥ ನಾವು ಅದನ್ನು ದೊಡ್ಡ ಗಂಟಲಿನಲ್ಲಿ ಕೂಗಾಡಿ ಈಗಿರುವ ನಮ್ಮ ಪ್ರೀತಿ ವಿಶ್ವಾಸಕ್ಕೆ ಧಕ್ಕೆ ಮಾಡಿಕೊಳ್ಳುವುದು ಬೇಡ…..
ಈ ಪಕ್ಷ ಬಂದರೆ ಹಾಗೆ, ಆ ಪಕ್ಷ ಬಂದರೆ ಹೀಗೆ ,ಎಂದು ನಮ್ಮೊಳಗೆ ಕಚ್ಚಾಡುವುದು ಬೇಡ. ಅಂತಹ ಕ್ರಾಂತಿಕಾರಿ ಬದಲಾವಣೆ ಈ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ…..ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. ತುಂಬಾ ಸಂತೋಷ. ಆದರೆ ಸಭ್ಯತೆಯ ಗೆರೆ ದಾಟದೆ, ನಾವೇ ಸರಿ ಎಂದು ಹಠ ಮಾಡದೆ, ದುರಹಂಕಾರ ಪ್ರದರ್ಶಿಸದೆ ನಮ್ಮ ಅಭಿಪ್ರಾಯ ಒಪ್ಪಲೇ ಬೇಕು ಎಂದು ಒತ್ತಡ ಹೇರದೆ ನಗುನಗುತ್ತಾ ಪ್ರತಿಕ್ರಿಯಿಸಿ…..
ಸೋಷಿಯಲ್ ಮೀಡಿಯಾಗಳಲ್ಲಿ ಎಷ್ಟೋ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ, ಕೌಟುಂಬಿಕ , ಹಳೆಯ ಸ್ನೇಹಿತರ, ತಮ್ಮ ಊರಿನವರ, ಹೀಗೆ ನಾನಾ ಗುಂಪುಗಳಿವೆ. ಈ ಚುನಾವಣಾ ಸಮಯದಲ್ಲಿ ಕೇವಲ ಯಾರೋ ಸ್ವಾರ್ಥಿಗಳ ರಾಜಕೀಯ ದಾಳಗಳಾಗುವುದು ಬೇಡ…..
ಟಿವಿಗಳಲ್ಲಿ ಅಜನ್ಮ ಶತ್ರುಗಳಂತೆ ಜಗಳವಾಡುವ ನಾಯಕರು ಕಾರ್ಯಕ್ರಮ ಮುಗಿದ ನಂತರ ನಿರೂಪಕನನ್ನೂ ಕರೆದುಕೊಂಡು ರಾತ್ರಿ ಊಟಕ್ಕೆ ಹೋಗುವುದು ಬಹಳಷ್ಟು ಇದೆ…ಹಹ.
ಸೀರೆ ಪಂಚೆ ಮಿಕ್ಸಿ ಕುಕ್ಕರ್ ದುಡ್ಡು ಬಾಡು ಬಾರುಗಳಿಗಿರುವ ಓಟಿನ ಶಕ್ತಿ, ಸುಳ್ಳು ಮತ್ತು ಆಕರ್ಷಕ ಮಾತುಗಳಿಗಿರುವ ಓಟು ಸೆಳೆಯುವ ಆಕರ್ಷಣೆ ಖಂಡಿತ ನಮ್ಮ ಅಭಿಪ್ರಾಯಗಳಿಗೆ ಇಲ್ಲ……
ಆದ್ದರಿಂದ, ದಯವಿಟ್ಟು ಗೆಳೆಯರೆ, ಚುನಾವಣಾ ಕಾರಣದಿಂದ ನಾವುಗಳು ಮನಸ್ತಾಪ ಮಾಡಿಕೊಳ್ಳುವುದು ಬೇಡ. ನಾವೆಲ್ಲರೂ ಸಾಮಾನ್ಯರು.
ದ್ವೇಷಕ್ಕಿಂತ ಪ್ರೀತಿ ವಿಶ್ವಾಸವೇಮುಖ್ಯ ನೆನಪಿರಲಿ……..
ಚುನಾವಣೆ ಒಂದು ಗುಪ್ತ ಮತದಾನ. ಒಂದಷ್ಟು ಯೋಚಿಸಿ ಅದರಲ್ಲಿ ಭಾಗವಹಿಸಿ. ಯಾರೋ ಅನಾಗರಿಕರಂತೆ ,ಜೈಕಾರದ ಪುಡಾರಿಗಳಂತೆ ವರ್ತಿಸುವುದು ಬೇಡ……ಎಂದಿನಂತೆ ಗೆಳೆತನದ ಘನತೆಯನ್ನು ಕಾಪಾಡೋಣ……..…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ.
ಲೇಖಕ-ವಿವೇಕಾನಂದ. ಎಚ್. ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…