ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ; ಲೋಕಸಭೆ ಸಚಿವಾಲಯ ಅದೇಶ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದೆ.

ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಈ ಹಿನ್ನೆಲೆ 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.

ಜನಪ್ರತಿನಿಧಿ ಕಾಯ್ದೆಯ ನಿಯಮದಂತೆ ರಾಹುಲ್ ಗಾಂಧಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಶಿಕ್ಷೆಯ ದಿನಾಂಕವಾದ ಮಾರ್ಚ್ 23, 2023ರಿಂದ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8ರಲ್ಲಿನ ಭಾರತೀಯ ಸಂವಿಧಾನದ 102 (1)(e) ವಿಧಿಯ ನಿಯಮಗಳ ಅಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಲೋಕಸಭೆ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

6 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

11 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

14 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago