ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣ, ಸಮಾಜ ಸೇವೆ, ಪರಿಸರ ಮೊದಲಾಗಿ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಕೊಂಗಾಡಿಯಪ್ಪನವರು  ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರಗಿದ್ದರು. ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಶಾಲೆ ಮುಂತಾದವುಗಳನ್ನು ಮೈಸೂರು ಮಹಾರಾಜರಿಂದ ಮಂಜೂರು ಮಾಡಿ ಮಾಡಿಸಿದರು. ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಗೆ ಬುನಾದಿಯನ್ನು ಹಾಕಿದ ಲೋಕಸೇವಾನಿರತ  ಡಿ.ಕೊಂಗಾಡಿಯಪ್ಪ ಅವರನ್ನು ದೊಡ್ಡಬಳ್ಳಾಪುರ ಜನರು ಎಂದಿಗೂ ಮರೆಯುವುದಿಲ್ಲ ಎಂದರು.

ದೊಡ್ಡಬಳ್ಳಾಪುರ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ,  ದೊಡ್ಡಬಳ್ಳಾಪುರ ಅಭಿವೃದ್ಧಿಯನ್ನು ಪ್ರಧಾನವಾಗಿ ಚಿಂತಿಸುತ್ತಿದ್ದ, ಮೈಸೂರು ಮಹಾರಾಜರಿಂದ ಅಭಿವೃದ್ಧಿ ಕಾರ್ಯಗಳನ್ನು ಸಕಾರಗೊಳಿಸಿದರು. ಸೇವಾ ಮನೋಭಾವದಿಂದ ಜನಮನ್ನಣೆ ಪಡೆದಿದ್ದ ಕೊಂಗಾಡಿಯಪ್ಪ ಅವರು ಮೈಸೂರು ಮಹಾರಾಜರಿಂದ ಲೋಕಸೇವಾ ನಿರತ ಎಂಬ ಬಿರುದಿಗೆ ಪುರಸ್ಕೃತರಾದರು. ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಅರಿತಿದ್ದ  ಮತ್ತು ಶಿಕ್ಷಕರೂ ಆಗಿದ್ದ ಕೊಂಗಾಡಿಯಪ್ಪ ಅವರು ಎಲ್ಲಾ ವರ್ಗದ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಕೊಂಗಾಡಿಯಪ್ಪ ಅವರ ಮನೆ ವಿದ್ಯಾರ್ಥಿನಿಲಯದಂತೆ. ಬಡ ವಿದ್ಯಾರ್ಥಿಗಳು ಅವರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ವಯಸ್ಕರ ಶಿಕ್ಷಣ ಶಾಲೆಯನ್ನು ಸಹ ನಡೆಸುತ್ತಿದ್ದರು.  ಕೊಂಗಾಡಿಯಪ್ಪ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ   ರಸ್ತೆಯ ಬದಿಯಲ್ಲಿ ಮರಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿಯನ್ನು ಜನರಲ್ಲಿ ಮೂಡಿಸುತ್ತಿದ್ದರು.. ದೊಡ್ಡಬಳ್ಳಾಪುರದಲ್ಲಿ ಮೈಸೂರು ಸಂಸ್ಥಾನಕ್ಕೆ ಮಾದರಿಯಾದ ಸ್ಕೌಟ್ ಗ್ರೂಪ್ ಸ್ಥಾಪಿಸಿದ್ದರು.  ಕೊಂಗಾಡಿಯಪ್ಪನವರ ಈ ಜನೋಪಯೋಗಿ ಮತ್ತು ಸೇವಾ ಕಾರ್ಯಗಳನ್ನು ಪರಿಗಣಿಸಿದ ಮೈಸೂರು ಮಹಾರಾಜರು  1918ರಲ್ಲಿ ಸಾರ್ವಜನಿಕ ಸೇವಾ ಪದಕ ಮತ್ತು 1931ರಲ್ಲಿ  ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್  ಲೋಕಸೇವಾನಿರತ ಎಂಬ ಬಿರುದು ನೀಡಿ ಗೌರವಿಸಿದರು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ‌‌ ಆಯುಕ್ತ ವೆಂಕಟರಾಜು, ಉಪನ್ಯಾಸಕಿ ಪುಪ್ಪಾವತಿ, ಶಿಕ್ಷಕರುಗಳಾದ  ಕೋದಂಡರಾಮ್, ಎಚ್.ಎನ್.ಪ್ರಕಾಶ್, ರಮೇಶ್ ಪೂಜಾರಿ, ವಿದ್ಯಾರ್ಥಿನಿಲಯಪಾಲಕ ಅಣ್ಣಯ್ಯ, ಕಲಾವಿದ   ದರ್ಗಾಜೋಗಿಹಳ್ಳಿ ಮಲ್ಲೇಶ್, ಬಾಶೆಟ್ಟಿಹಳ್ಳಿ ಮಂಜುನಾಥ್, ಎಂ.ಎ.ಬಿ.ಎಲ್ ಪ್ರೌಢಶಾಲೆಯ ಶಿಕ್ಷಕರು  ಭಾಗವಹಿಸಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

5 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

5 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

6 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

14 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

17 hours ago