2013 ರ ನವೆಂಬರ್ 29 ರಂದು ಜಮೀನು ಸರ್ವೇ ಕಾರ್ಯ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ರೈತನಿಂದ 3,000/- ರೂ. ಲಂಚದ ಹಣ ಸ್ವೀಕರಿಸುತ್ತಿದ್ದ ಸರ್ವೇಯರ್ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿತ ಸರ್ವೆಯರಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ರೈತ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಇವರಿಗೆ ಸೇರಿದ ಸಾಸಲು ಗ್ರಾಮದ ಸರ್ವೆ ನಂ. 26/2 ರಲ್ಲಿ 0-30 ಗುಂಟೆ ಜಮೀನಿನ ಸರ್ವೆ ಕಾರ್ಯ ಮಾಡಿದ್ದು, ಜಮೀನಿನ 11 ಇ ನಕ್ಷೆ ಮಾಡಿಕೊಡಲು ಸರ್ವೆಯರ್ ಡಿ.ಬಿ ಗೌಡ ಅವರು 3,000/- ರೂ. ಲಂಚಕ್ಕೆ ಎನ್. ಲಕ್ಷ್ಮಣ ಬಿನ್ ನಾರಾಯಣಪ್ಪ ಅವರಲ್ಲಿ ಬೇಡಿಕೆ ಒತ್ತಾಯಿಸಿ, 2013 ಡಿಸೆಂಬರ್ 01 ರಂದು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ತಂಡಕ್ಕೆ ಸಿಕ್ಕಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಮಣ್ಯ ಪ್ರಕರಣದ ತನಿಖೆ ನಡೆಸಿದ್ದು, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಂ.ಜೆ ದಯಾನಂದ, ಆರೋಪಿತರ ವಿರುದ್ಧ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸನ್ನಿದಾನಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಸದರಿ ಪ್ರಕರಣವು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದೆ.
ಪ್ರಕರಣದ ಸಂಬಂಧ 2026 ಜನವರಿ 30 ರಂದು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಕುಮಾರ್ ರವರು ಅಂತಿಮ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಆರೋಪಿತರಾದ ದೇವನಹಳ್ಳಿಯ ಖಾಸಗಿ ಸರ್ವೇಯರ್ ಡಿ.ಬಿ. ಗೌಡ ವಿರುದ್ಧ ಆರೋಪ ಸಾಬೀತಾಗಿರುವುದರಿಂದ ಆರೋಪಿತರಿಗೆ ಭ್ರಷ್ಟಾಚಾರ ತಡೆ ಕಾಯ್ದೆ ಕಲಂ:07 ರಡಿಯಲ್ಲಿ ಆರು ತಿಂಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000/- ರೂ. ದಂಡ ಮತ್ತು ಕಲಂ 13(1)(ಡಿ)ರ/ಜೋ13(2)ರಡಿ ಒಂದು ವರ್ಷ ಸರಳ ಜೈಲು ಶಿಕ್ಷೆ ಮತ್ತು ರೂ 15,000/- ರೂ ದಂಡ ವಿಧಿಸಿದ್ದಾರೆ.
ದಂಡ ಕಟ್ಟಲು ತಪ್ಪಿದ್ದಲ್ಲಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಡಾ. ಕೆ. ವಂಶಿಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…