Oplus_131072
ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಗ್ರೇಡ್ 2 ತಹಶೀಲ್ದಾರ್ ದಿವಾಕರ್….
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರರಿಂದ ಸುಮಾರು ಒಂದೂವರೆ ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತ ಆಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ 1/1A1 ರೀ ಪೋಡಿ 1/4, 1/7. 8 .20 ಗುಂಟೆ ಕೋರ್ಟ್ ಸೇಲ್ ಡೀಡ್ ಪ್ರಕಾರ ಖಾತೆ ಮಾಡಬೇಕಾಗಿತ್ತು, ಇದನ್ನು ಮಾಡಿಕೊಡಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ.ಎಲ್ ಅವರ ಬಳಿ ಸುಮಾರು 2ಲಕ್ಷ ಬೇಡಿಕೆ ಇಟ್ಟಿದ್ದರು, ಒಂದೂವರೆ ಲಕ್ಷ ಕೊಡುವಂತೆ ಮಾತುಕತೆ ಆಗಿತ್ತು, ಅದರ ಪ್ರಕಾರ ಇಂದು ದೇವನಹಳ್ಳಿ ಬಳಿ ಮಾತುಕತೆ ಪ್ರಕಾರ ಒಂದೂವರೆ ಲಕ್ಷ ನೀಡುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಮತ್ತು ತಂಡ ದಾಳಿ ನಡೆಸಿ ಬಂಧಿಸಲಾಗಿದೆ.
ಸದ್ಯ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…