ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.
7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.
ಅದೇರೀತಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್ ರೈಲಿಗೆ ಕೂಡ ಚಾಲನೆ ನೀಡಿದರು.
ಇದೇ ವೇಳೆ ಅಮೃತ್‍ಸರದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಆಗಿ ಚಾಲನೆ ನೀಡಲಾಯಿತು.
ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.
ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ವರೆಗೆ ಸಂಚಾರ ಆರಂಭಿಸಿದ್ದಾರೆ.
ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 117 ಜನರು ಪ್ರಯಾಣ ನಡೆಸಿದ್ದಾರೆ.
ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ 16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸಿದ್ದಾರೆ.
ರಾಗಿಗುಡ್ಡದಿಂದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಜಯದೇವ ಮೆಟ್ರೋ ಸ್ಟೇಷನ್ನಲ್ಲಿ ಐದು ನಿಮಿಷ ನಿಲ್ಲಿತು. ನಂತರ ಸಿಲ್ಕ್ ಬೋರ್ಡ್, ಹೊಂಗಸಂದ್ರ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ರೈಲಿನಿಂದ ಇಳಿದರು.
ಹಳದಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಕ್ಕರೂ ಪ್ರಯಾಣಿಕರಿಗೆ ಸಂಚಾರಕ್ಕೆ ಅವಕಾಶವಿಲ್ಲ. ನಾಳೆ ಬೆಳಿಗ್ಗೆ ಐದು ಗಂಟೆಯಿಂದ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್ ಅಂದಾಜಿಸಲಾಗಿದೆ.
ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ.
ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3) ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.
ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…