ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.
ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.
ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…