ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ, ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಹೇಳಿಕೆ

ಬೆಂಗಳೂರು ವಕೀಲರ ಸಂಘಕ್ಕೆ 2025-28ರ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ 6,820 ಮತಗಳನ್ನು ಪಡೆಯುವ ಮೂಲಕ ವಿವೇಕ್ ಸುಬ್ಬಾರೆಡ್ಡಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಅದರಂತೆ ದೊಡ್ಡಬಳ್ಳಾಪುರ ಹಿರಿಯ ರಾಜಕೀಯ ಮುತ್ಸದ್ದಿ ದಿ. ಸಿ. ಡಿ.ಸತ್ಯನಾರಾಯಣ ಗೌಡರ ಪುತ್ರ ಗಿರೀಶ್ ಕುಮಾರ್ ಸಿ.ಎಸ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ.

ಗಿರೀಶ್ ಕುಮಾರ್ ಸಿ.ಎಸ್ ಅವರು ಎಎಬಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ 5,060 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಆ‌ರ್.ಗೌಡ ಅವರನ್ನು 3,128 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ತಾಲೂಕು ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್, ವಕೀಲರ ಸಂಘದ ಉಪಾಧ್ಯಕ್ಷನಾಗಿ ಆಯ್ಕೆಯಾಗಿರುವುದು ನನಗೆ ದೊರೆತ ದೊಡ್ಡ ಗೌರವ. ಈ ಸ್ಥಾನವನ್ನು ಗೌರವದಿಂದ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸಲು ಪ್ರಯತ್ನಿಸುತ್ತೇನೆ. ನಮ್ಮ ವಕೀಲರ ಕಷ್ಟ ಸಂಕಷ್ಟಗಳಿಗೆ ದನಿಯಾಗಿ ಅವರ ಹಕ್ಕುಗಳ ಮತ್ತು ಹಿತರಕ್ಷಕನಾಗಿ ಸದಾ ನಿಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಗೆಲುವಿನಲ್ಲಿ ಎಲ್ಲಾ ವಕೀಲರ ಬೆಂಬಲದ ಜೊತೆಗೆ ದೊಡ್ಡಬಳ್ಳಾಪುರ ವಕೀಲರ ಸಹಕಾರವನ್ನು ಮರೆಯುವಂತಿಲ್ಲ. ಜೊತೆಗೆ ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತ ವಕೀಲ ಬಂದುಗಳಿಗೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಕೀಲರ ಸಂಘಕ್ಕೆ ಕಟ್ಟಡವಿಲ್ಲ. ಶೀಘ್ರವಾಗಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು. ಪ್ರತ್ಯೇಕ ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಬೇಡಿಕೆಗಳನ್ನು ದೊಡ್ಡಬಳ್ಳಾಪುರ ವಕೀಲರ ಸಂಘದ ವತಿಯಿಂದ ಉಪಾಧ್ಯಕ್ಷ ಗಿರೀಶ್ ಕುಮಾರ್ ಅವರ ಮುಂದಿಡಲಾಯಿತು.

ದೊಡ್ಡಬಳ್ಳಾಪುರ ವಕೀಲರ ಸಂಘದ ರವಿ ಮಾವಿನಕುಂಟೆ ಮಾತನಾಡಿ, ಬೆಂಗಳೂರು ವಕೀಲರ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ಗಿರೀಶ್ ಕುಮಾರ್ ಅವರು ಆಯ್ಕೆ ಆಗಿರುವುದು ದೊಡ್ಡಬಳ್ಳಾಪುರಕ್ಕೆ ಹೆಮ್ಮೆಯ ವಿಷಯ. ತಾಲೂಕಿನ ವಕೀಲರ ಕಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯಕ್ತಿ, ಮುಂದಿನ ದಿನಗಳಲ್ಲಿ ತಾಲೂಕು‌ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಸಹಕರಿಸಬೇಕು. ಪಕ್ಷ ಭೇದ ಮರೆತು ವಕೀಲರ ಏಳಿಗೆಗೆ ಶ್ರಮಿಸುತ್ತಾರೆ ಎಂಬ ಭಾವನೆ ನಮ್ಮಲ್ಲಿದೆ ಎಂದು ತಿಳಿಸಿದರು.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಅಂಜನ್ ಕುಮಾರ್, ತಾಲೂಕು ಸಂಘದ ಉಪಾಧ್ಯಕ್ಷ ಎಂ.ಸುರೇಶ್, ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ವಿಜಿಕುಮಾರ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago