ಕೋಲಾರ: ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ವತಿಯಿಂದ ಬಡವರಿಗೆ ಅನುಕೂಲವಾಗುವಂತೆ ಎಲ್ಲಾ ತರಹದ ಔಷಧಿಗಳು ಕಡಿಮೆ ಬೆಲೆಗೆ ದೊರೆಯುವಂತೆ ಮಾಡಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಕ್ಕಲೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಂ.ಪಾಲಾಕ್ಷಗೌಡ ತಿಳಿಸಿದರು
ತಾಲೂಕಿನ ವಕ್ಕಲೇರಿ ಗ್ರಾಮದ ಸೊಸೈಟಿ ಆವರಣದಲ್ಲಿ ಸೋಮವಾರ ಜನ ಔಷಧ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶ್ರೀಮಂತರು ಬ್ರ್ಯಾಂಡೆಡ್ ಔಷಧಗಳನ್ನು ಹೆಚ್ಚಿನ ಬೆಲೆ ಕೊಟ್ಟು ಖರೀದಿಸುತ್ತಾರೆ ಅದೇ ಗುಣಮಟ್ಟದ ಔಷಧಗಳು ಈ ಕೇಂದ್ರದಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಲಭ್ಯವಿದ್ದು ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕೊರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬುದು ಈ ಕೇಂದ್ರದ ಉದ್ದೇಶವಾಗಿದ್ದು ಬಡವರು ಹೆಚ್ಚಿನ ಅನುಕೂಲ ಪಡೆಯುವಂತಾಗಬೇಕು ಎಂದರು.
ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವು ಇಡೀ ದೇಶದ ಯಾದ್ಯಂತ ಜನ ಔಷಧಿ ಕೇಂದ್ರಗಳನ್ನು ಸ್ಧಾಪಿಸಿದೆ ಶ್ರೇಷ್ಠ ಗುಣಮಟ್ಟದ ಔಷಧಿಗಳನ್ನು ಕಡಿಮೆ ಬೆಲೆಗೆ ಜನರಿಗೆ ಒದಗಿಸಲಾಗುತ್ತಾ ಇದ್ದು ಕೇಂದ್ರದಿಂದ ಯಾವುದೇ ಲಾಭದ ಆಕಾಂಕ್ಷೆಗಳು ಇಲ್ಲದೇ ಜನರಿಗೆ ತಲುಪಿಸುವ ಉದ್ದೇಶದಿಂದ ಮಾತ್ರವೇ ವಕ್ಕಲೇರಿ ಹೋಬಳಿ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಶ್ಮಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ ಎಂಬುದು ಬಹುಮುಖ್ಯವಾಗಿದ್ದು ಚಿಕಿತ್ಸೆಯ ಜೊತೆಗೆ ಔಷಧೀಗಳು ಪ್ರಮುಖವಾದ ಪಾತ್ರ ವಹಿಸುತ್ತವೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಬಡವರನ್ನು ಗುರಿಯಾಗಿಸಿ ಈ ಔಷಧೀ ಕೇಂದ್ರವನ್ನು ಪ್ರಾರಂಭಿಸಿದ್ದು ಇದರ ಪ್ರಯೋಜನ ವಾಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ವಕ್ಕಲೇರಿ ಸೊಸೈಟಿ ಉಪಾಧ್ಯಕ್ಷ ವಿ.ಮಂಜುನಾಥ್, ಸದಸ್ಯರಾದ ಎಂ.ಆನಂದ್ ಕುಮಾರ್, ಆರ್ ಚಂದ್ರೇಗೌಡ, ಟಿ.ಮುನಿಯಪ್ಪ, ವೆಂಕಟಗಿರಿಯಪ್ಪ, ಜಿ.ಎಸ್ ಸದಾಶಿವಯ್ಯ, ಎಸ್ ಕೃಷ್ಣಪ್ಪ, ಚಿದಾನಂದ್, ರಮೇಶ್, ಶಾಂತಕುಮಾರಿ, ಚೌಡಮ್ಮ, ಸಿಇಓ ಎಂ.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ರಾಧಿಕಾ ಮಂಜುನಾಥ್, ಮಾಜಿ ಅಧ್ಯಕ್ಷ ಮನೋಹರ್ ಗೌಡ, ಸದಸ್ಯ ಶ್ರೀಪತಿ, ಮಾಜಿ ಸದಸ್ಯ ಬಿ.ಕೆ ರಾಮಾಂಜಿ, ಸೇರಿದಂತೆ ಗ್ರಾಮಸ್ಥರು ರೈತರು ಇದ್ದರು
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…