ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟಿಸ್ ಕೊಟ್ಟಿತ್ತಲ್ಲಾ ಏಕೆ..?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ  ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ  ನೋಟಿಸ್ ಕೊಟ್ಟಿದ್ದಾರೆ. ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ.

ನಾನು ಸಚಿವರಾದ ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟಿಸ್ ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಆಗಿರಲಿ ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

 ಬಿಜೆಪಿಯ ಈ ಡಬ್ಬಲ್ ಗೇಮ್  ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

*ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರಶ್ನಿಸಬೇಕು*

ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ  ಕರ್ನಾಟಕಕ್ಕೆ  ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ  ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ  ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60  ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ  ಮಾತನಾಡಿದ್ದಾರೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ  ಎಂದರು ಇದಕ್ಕೆ ಏನು ಹೇಳಬೇಕು? ಎಂದರು . ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ  ನಿರ್ಧಾರವಾಗುತ್ತದೆ. 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದ್ದಾರೆ. 5495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದರು. ಪೇರಿಫೆರಲ್ ರಿಂಗ್ ರೋಡ್  ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸು  ಮಾಡಿದ್ದರು. ಒಟ್ಟು 11495 ಕೋಟಿಗಳನ್ನು ಕೊಟ್ಟರೆ. ಇದನ್ನು ನಾವು ಕೇಳಬೇಕು.

ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

*ಹಣಕಾಸು ಆಯೋಗ ಶಿಫಾರಸು ಮಾಡಿದ್ದ ವಿಶೇಷ ಅನುದಾನ ನೀಡಿದ್ದರೆ ರಾಜಕೀಯ ಬಿಟ್ಟುಬಿಡುವೆ*

11495 ಕೋಟಿ ರೂಪಾಯಿಗಳನ್ನ ಕೊಟ್ಟಿದ್ದರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ ಎಂದರು. ಪ್ರಹ್ಲಾದ ಜೋಶಿ ಬಿಡುತ್ತಾರೆಯೇ ಕೇಳಿ ಎಂದು ಪ್ರಶ್ನಿಸಿದರು. ಸುಳ್ಳು ಹೇಳಿದ್ದನ್ನು ಕೇಳಿ ಅದನ್ನು ಬರೆಯುತ್ತೀರಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

*ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ*

ಬಿಜೆಪಿಯವರು ಗ್ಯಾರಂಟಿಗೆ ವಿರುದ್ದವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಇರಬೇಕು. ಅದಕ್ಕೆ ಅವರನ್ನು ಬಡತನ ವಿರೋಧಿಗಳು ಎಂದು ಕರೆಯುವುದು. ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆ ಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ. ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ.  ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ ಲೆಕ್ಕ ಕೊಡುತ್ತಾರೆಯೇ ? ಎಂದು ಸವಾಲು ಹಾಕಿದರು.

ವಕ್ಫ್ ವಿಚಾರದಲ್ಲಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ  ಎಂದು ಹೇಳಿದ ಮೇಲೂ ಬಿಜೆಪಿ ಹೋರಾಟ ಮಾಡುತ್ತಿದೆ ಎಂದರೆ ರಾಜಕೀಯ ಅಲ್ಲವೇ ಎಂದರು.

*ವಕ್ಫ್ ವಿಚಾರವಾಗಿ ಬಿಜೆಪಿ ರಾಜಕಾರಣಕ್ಕಾಗಿ ಪ್ರತಿಭಟನೆ*

ವಕ್ಫ್ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಬಿಜೆಪಿಯವರು ಯಾವಾಗಲೂ ನೈಜ  ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಾರೆ ಎಂದರು.

*ಪ್ರತಾಪ್ ಸಿಂಹ ಮಹಾನ್ ಕೋಮುವಾದಿ*

ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿಗಳು ಸಂಪೂರ್ಣ ಮುಸ್ಲಿಂ ಆಗಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೊಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ ಎಂದರು. ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗು ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು.

*ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ?*

ಅಭಿವೃದ್ಧಿ ಬಗ್ಗೆ ಚರ್ಚೆ ಯಾರೊಬ್ಬರೂ ಮಾಡುತ್ತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ  ಸಿಎಂ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು..ಅವು ಅಭಿವೃದ್ಧಿಯಲ್ಲವೆ ಎಂದು ಪ್ರಶ್ನಿಸಿದರು 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ  ಇವೆಲ್ಲ ಅಭಿವೃದ್ದಿಯಲ್ಲವೇ ಎಂದರು.

*ಶಿಗ್ಗಾಂವಿಯಲ್ಲಿ ನೂರಕ್ಕೆ ನೂರು ಗೆಲ್ಲಲಿದ್ದೇವೆ : ಸಿಎಂ ವಿಶ್ವಾಸ*

ಇಂದು ಮತ್ತು ನಾಳೆ ಎರಡು ದಿನ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ಮಾಡಲಾಗುವುದು. ಶಿಗ್ಗಾಂವಿ ಕ್ಷೇತ್ರದಲ್ಲಿ ಹಿಂದೆಯೂ ಪ್ರಚಾರ ಮಾಡಿದ್ದೇನೆ. ಕೊನೆಯಲ್ಲಿ ಅಭ್ಯರ್ಥಿಯನ್ನು ನಿಗದಿ ಮಾಡಿದ್ದರಿಂದ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡಲಾಗಲಿಲ್ಲ. ಈ ಬಾರಿ ಮೂರು ದಿನ ಶಿಗ್ಗಾಂವಿ ಭೇಟಿ ನೀಡುತ್ತಿದ್ದು, ಶಿಗ್ಗಾಂವಿ ಯಲ್ಲಿ ನೂರಕ್ಕೇ ನೂರು ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಬಂದಿತ್ತು. ಈ ಬಾರಿಯೂ ಕೂಡ ನಮಗೆ ಮುನ್ನಡೆ ದೊರೆಯುವ ಪರಿಸ್ಥಿತಿ ಇದ್ದು ನಾವು ಗೆಲ್ಲುತ್ತೇವೆ ಎಂದು ತಿಳಿಸಿದರು.

Ramesh Babu

Journalist

Share
Published by
Ramesh Babu

Recent Posts

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

5 hours ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

8 hours ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

13 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

1 day ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

1 day ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

1 day ago