ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.
ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…