Categories: ಕೋಲಾರ

ವಕ್ಫ್ ಬೋರ್ಡ್‌ ಹಿಂದೂಗಳ ಜಮೀನು ಕಬಳಿಕೆ ಖಂಡನೀಯ: ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧ- ಓಂ ಶಕ್ತಿ ಚಲಪತಿ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ನಂತರದಿಂದ ವಿವಿಧ ಭಾಗಗಳಲ್ಲಿ ರೈತರ ಜಮೀನನ್ನು ತನ್ನದು ಎಂದು ಹೇಳಿಕೊಂಡು ಅನ್ನದಾತರನ್ನು ಒಕ್ಕಲೆಬ್ಬಿಸಲು ವಕ್ಫ್ ಬೋರ್ಡ್‌ ಹೊರಟಿದ್ದು ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಯಾವುದೇ ಕಾರಣಕ್ಕೂ ರೈತರ ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯ ಸರ್ಕಾರವು ಕೇವಲ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್‌ ಹೆಸರಿನಲ್ಲಿ ರೈತರ ಜಮೀನು ಕಬಳಿಕೆಯ ಹುನ್ನಾರಗಳು ನಡೆಯುತ್ತಿದೆ ನಾವು ಕೂಡ ಹಿಂದೂಗಳಾಗಿ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಈಗಾಗಲೇ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಸಹ ಇದರ ವಿರುದ್ದ ನಿಂತಿದ್ದಾರೆ ಕೋಲಾರ ಜಿಲ್ಲೆಯಲ್ಲಿ ಕೂಡ ಪ್ರಭಾವಿ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಜಾಗವನ್ನು ಕಬಳಿಸುವ ಪ್ರಯತ್ನಗಳಾಗಿದೆ ಇದರ ವಿರುದ್ದ ಹಿಂದುಗಳಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಾಗಿದೆ ಎಂದು ಎಚ್ಚರಿಸಿದರು.

ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಹಿಂದೂಗಳ ಧ್ವನಿಯಾಗಿದ್ದೇವೆ ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡಲಾಗುತ್ತದೆ ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರವು ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ಬೆಂಬಲಕ್ಕೆ ನಿಂತಿದ್ದು ಇದಕ್ಕೆ ಉತ್ತರವನ್ನು ಜನ ನೀಡಲಿದ್ದಾರೆ ಎಂದು ಓಂಶಕ್ತಿ ಚಲಪತಿ ತಿಳಿಸಿದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

7 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

9 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

11 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

11 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

13 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

18 hours ago