ವಕ್ಫ್ ವಿವಾದವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ: ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ: ವಕ್ಫ್ ಬೋರ್ಡ್‌ ನಿಂದ ರೈತರ ಭೂಮಿಯ ರಕ್ಷಣೆ ಹಾಗೂ ಸಚಿವ ಜಮೀರ್ ಅಹ್ಮದ್ ರನ್ನ ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹ

ವಕ್ಫ್ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ವಿರೋಧಪಕ್ಷ ಬಿಜೆಪಿ, ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ.

ವಕ್ಫ್ ಬೋರ್ಡ್‌ ನಿಂದ ರೈತರ ಭೂಮಿಯ ರಕ್ಷಣೆ ಮತ್ತು ಕರ್ನಾಟಕ ಸರ್ಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಲಾಯಿತು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ‌ ಘಟಕದ ರಾಮಕೃಷ್ಣಪ್ಪ, ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ. ಒಂದು ಕೋಮಿನ ಓಲೈಕೆಗಾಗಿ ರಾಜ್ಯದ ರೈತರ ಸಮುದಾಯವನ್ನು ನಾಶ ಮಾಡಲು ಹೊರಟಿರುವ ಸಚಿವ ಜಮೀರ್ ಅಹ್ಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡವನ್ನು ಹೇರುತ್ತಿದ್ದಾರೆ. ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು..

ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ. ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಇನ್ನೂ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತ್ಮಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ಧುಮುಕಿದ್ದೇವೆ ಎಂದರು.

ಸಚಿವ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ಈ ಕೂಡಲೇ ಹಿಂಪಡೆಯಬೇಕು. ಯಾವುದೇ ರೈತರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಅವಕಾಶ ನೀಡುವುದಿಲ್ಲವೆಂದು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದಲ್ಲಿಯೂ ನೋಟಿಸ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರದಲ್ಲಿ ವಕ್ಫ್ ಸಚಿವರು ಅಧಿಕೃತ ಆದೇಶ ಮಾಡಿರಲಿಲ್ಲ. ಈಗಿನ ವಕ್ಫ್ ಸಚಿವರ ಒತ್ತಡದಿಂದಾಗಿ ಪಹಣಿ ಇಂಡೀಕರಣ ಆಗಿ ವಕ್ಫ್ ಆಸ್ತಿ ಎಂದು ಬೆದರಿಸುವ ಕೆಲಸ ನಡೆದಿದೆ. ಈ ನಿಟ್ಟಿನಲ್ಲಿ 1974ರಲ್ಲಿ ಜಾರಿಗೆ ತಂದಿರುವ ಈ ವಕ್ಫ್ ಆಸ್ತಿ ವಿವಾದ ಗೆಜೆಟ್ ಅಧಿಸೂಚನೆ ರದ್ದು ಮಾಡಬೇಕು. ರೈತರ ಹೆಸರಿಗೆ ಮತ್ತೆ ಪಹಣಿ ಮಾಡಬೇಕು ಎಂದು ಆಗ್ರಹಿಸಿ ಹೋರಾಟ ರೂಪಿಸಲಾಗಿದೆ. ವಕ್ಫ್ ಆಸ್ತಿ ಸಮಗ್ರ ತನಿಖೆಯಾದರೆ ಶೇ60ರಷ್ಟು ಮುಸ್ಲಿಮರು ಜೈಲು ಸೇರುತ್ತಾರೆ. ರೈತರು ತಮ್ಮ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸಹುದ್ಯೋಗಿಗಳ ತಂಡ ಮೂಡಾ, ವಾಲ್ಮೀಕಿ ನಿಗಮದ ಹಗರಣಗಳಲ್ಲಿ ಭಾಗಿಯಾಗಿದೆ. ಜನರ ಯೋಚನೆ ಬೇರೆಡೆ ಸೆಳೆಯಲು ಇದೊಂದು ಹೊಸ ಹುನ್ನಾರ ಪ್ರಾರಂಭಿಸಿದೆ. ನೂರಾರು ವರ್ಷಗಳ ಹಿಂದಿನ ಸ್ವತ್ತು ತಮ್ಮದೇ ಎನ್ನುತ್ತಿದ್ದಾರೆ. ರಾಜ್ಯದಾದ್ಯಂತ ಸುಮಾರು 16 ಸಾವಿರ ಎಕರೆಗೂ ಅಧಿಕ ರೈತರ, ಮಠಾಧೀಶರ, ಪರಿಶಿಷ್ಟರ ಭೂಮಿ ವಕ್ಫ್ ಬೋರ್ಡ್ ಎಂದು ನಮೂದಾಗಿದೆ. ರೈತರು ಬೀದಿಗೆ ಬೀಳುವ ಆತಂಕ ಎದುರಾಗಿದೆ ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಸದಸ್ಯ ಬಂತಿ ವೆಂಕಟೇಶ್, ನಗರ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

4 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

7 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

14 hours ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

14 hours ago

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

1 day ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

1 day ago