ಶಿರಸಿ: ವನ್ಯಜೀವಿಗಳ ಬೇಟೆ ಮತ್ತು ಅವುಗಳ ಮಾಂಸದಿಂದ ಅಡುಗೆ ತಯಾರಿಸುತ್ತಿದ್ದ ಜಾಲದ ಮೇಲೆ ಶಿರಸಿಯ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಬನವಾಸಿ ವಲಯದ ಎಕ್ಕಂಬಿ ಸಮೀಪದ ಮೂಡೆಬೈಲ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆಗಿಳಿದ ಬನವಾಸಿ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೂಡೆಬೈಲ್‌ನ ಶಂಕರ ಲಕ್ಷ್ಮಣ ನಾಯ್ಕ ಎಂಬ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಮನೆಯಲ್ಲಿ ಕಾಡು ಹಂದಿಯ ಸಾರು ಮತ್ತು ಆಮೆಯ ಸುಕ್ಕಾ ತಯಾರಿಸುತ್ತಿದ್ದಾಗ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಡುಹಂದಿ ಮಾಂಸ ಹಾಗೂ ಆಮೆಯ ಮಾಂಸವನ್ನು ಪಾತ್ರೆಗಳ ಸಮೇತ ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಂಕರ ಲಕ್ಷ್ಮಣ ನಾಯ್ಕ, ಗಂಗಾಧರ ಗಣಪತಿ ಗೌಡ, ಮತ್ತು ಶಂಕರ ಬೊಮ್ಮು ಗೌಡ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ರವಿ ಮಾದೇವ ಗೌಡ ಮತ್ತು ಗಣಪತಿ ಬೊಮ್ಮು ಗೌಡ ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಬನವಾಸಿ ವಲಯ ಅರಣ್ಯಾಧಿಕಾರಿ (RFO) ಭವ್ಯಾ ನಾಯ್ಕ ಅವರ ನೇತೃತ್ವದ ಉಪವಲಯ ಅಧಿಕಾರಿ ಗಜೇಂದ್ರ ಮೊಗೇರ, ಬಾಲರಾಜ ಡಿ, ಯಶೋಧಾ ನಾಯ್ಕ, ಮಂಜುನಾಥ ಗಂಗಮತ, ಗಸ್ತು ಅರಣ್ಯ ಪಾಲಕರಾದ ಭೋಜು ಚೌಹಾಣ್, ಅಮೃತ್ ಅರಿಬೆಂಚಿ ಕನಕಪ್ಪ ತಳವಾರ, ಮಲ್ಲಿಕಾರ್ಜುನ ಗುದಗಿ, ಮತ್ತು ರಮೇಶ್ ಎಚ್ ಸಿ, ಅರಣ್ಯ ವೀಕ್ಷಕರಾದ ಈಶ್ವರಪ್ಪ ಎಚ್.ಎಸ್ ಹಾಗೂ ಮಂಜುನಾಥ ಜೆ ನಾಯ್ಕ ಹಾಗೂ ಸಿಬ್ಬಂದಿಗಳು ಈ ಮಹತ್ವದ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಬೇಟೆಯ ಕುರಿತು ಅರಣ್ಯ ಇಲಾಖೆ ತನಿಖೆ ಮುಂದುವರೆಸಿದೆ.
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…