ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ

 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು‌ ಕೇರಳದ ವಯನಾಡು ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನಾ ಲೋಕಸಭೆ ವಿಪಕ್ಷ ನಾಯಕ ಹಾಗೂ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಕಲ್ಬೆಟ್ಟಾದ ಹೊಸ ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ನವೆಂಬರ್ 13 ರಂದು ವಯನಾಡಿನಲ್ಲಿ ಉಪಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಂದ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಕೇರಳದ ಲೋಕಸಭೆ ಸ್ಥಾನವನ್ನು ತೆರವು ಮಾಡಲು ನಿರ್ಧರಿಸಿದ ನಂತರ ಉಪಚುನಾವಣೆ ಅನಿವಾರ್ಯವಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago