ವಯನಾಡು ಭೂಕುಸಿತ: ವಯನಾಡು ಕಷ್ಟಕ್ಕೆ ಸ್ಪಂದಿಸಿದ ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್: ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ನೆರವು ನೀಡಿದ ಡಾರ್ಲಿಂಗ್ ಪ್ರಭಾಸ್

ಬಾಹುಬಲಿ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ತೆಲುಗಿನ ನಟ ಪ್ರಭಾಸ್ ಅವರು ವಯನಾಡು ದುರಂತಕ್ಕೆ ರೂ.2 ಕೋಟಿ ರೂ. ಗಳನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

ಇತ್ತೀಚೆಗೆ ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಾಷ್ಟು ಆಸ್ತಿ ಪಾಸ್ತಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಕೆಲವು ಗ್ರಾಮಗಳೇ ದುರಂತ ಕಣ್ಮರೆಯಾಗಿವೆ. ಸದ್ಯ ವಯನಾಡಿಗೆ ಅಗತ್ಯ ನೆರವು ಬೇಕಾಗಿದೆ. ಈ ನಿಟ್ಟಿನಲ್ಲಿ ಸ್ಟಾರ್‌ ನಟರು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುತ್ತಿದ್ದಾರೆ. ಇದೀಗ ಬಾಹುಬಲಿ ಖ್ಯಾತಿಯ ರೆಬೆಲ್ ಸ್ಟಾರ್ ಪ್ರಭಾಸ್ ಸಹ ವಯನಾಡು ಕಷ್ಟಕ್ಕೆ ಸ್ಪಂದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಭೂಕುಸಿತ ಸಂತ್ರಸ್ತರ ನೆರವಿಗೆ ನಿಂತವರ ಪೈಕಿ ಅತ್ಯಧಿಕ ಹಣ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.

ವಯನಾಡು ದುರಂತಕ್ಕೆ ಪರಿಹಾರ ಘೋಷಿಸಿದ ಸ್ಟಾರ್ ನಟರಿವರು…

ಪ್ರವಾಹ ಪರಿಹಾರಕ್ಕಾಗಿ ಟಾಲಿವುಡ್ ಮತ್ತು ಕಾಲಿವುಡ್ ನಟರು ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ 1ಕೋಟಿ ದೇಣಿಗೆ ನೀಡಿದ್ದಾರೆ. ಅಲ್ಲು ಅರ್ಜುನ್ 25 ಲಕ್ಷ ರೂ. ಸೂರ್ಯ, ಜ್ಯೋತಿಕಾ ಮತ್ತು ಕಾರ್ತಿ ಒಟ್ಟಾಗಿ 50 ಲಕ್ಷ ರೂ. ರಶ್ಮಿಕಾ ಮಂದಣ್ಣ 10 ಲಕ್ಷ ರೂ. ಕಮಲ್ ಹಾಸನ್ 25 ಲಕ್ಷ ರೂ. ನಯನತಾರಾ, ವಿಘ್ನೇಶ್ ಶಿವನ್ ₹20 ಲಕ್ಷ ದೇಣಿಗೆ ನೀಡಿದ್ದಾರೆ. ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಮತ್ತು ಅವರ ಪುತ್ರ ದುಲ್ಕರ್ ಸಲ್ಮಾನ್ ಕ್ರಮವಾಗಿ 25 ಲಕ್ಷ ಮತ್ತು 15 ಲಕ್ಷ ರೂ. ಫಹಾದ್ ಫಾಸಿಲ್ ಮತ್ತು ಅವರ ಪತ್ನಿ ನಜ್ರಿಯಾ ನಾಜಿಮ್ ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ತಮಿಳು ನಟ ವಿಕ್ರಮ್ 20 ಲಕ್ಷ‌ ನೀಡಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago