ವಯನಾಡು ಭೂ ಕುಸಿತ: ಘಟನಾ ಸ್ಥಳಕ್ಕೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿ ಭೇಟಿ,‌ ಪರಿಶೀಲನೆ: ಅಲ್ಲಿನ ಪರಿಸ್ಥಿತಿ ಕಣ್ಣಾರೆ ಕಂಡು ‘ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ’ ಎಂದು ಭಾವುಕರಾದ ರಾಹುಲ್ ಗಾಂಧಿ

ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ, ಅನೇಕ ಸಾವು-ನೋವು, ಆಸ್ತಿ-ಪಾಸ್ತಿಗೆ ಹಾನಿ ಉಂಟಾಗಿದೆ.

ಈ ಹಿನ್ನೆಲೆ ಇಂದು ವಯನಾಡಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಡ್ಡ ಕುಸಿತ ಸಂಭವಿಸಿದ ಮುಂಡುಕೈ ಹಾಗೂ ಅಕ್ಕಪಕ್ಕದ ನಾಲ್ಕು ಹಳ್ಳಿಗಳಲ್ಲಿ ಸುತ್ತಾಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನನ್ನ ತಂದೆ ಮೃತಪಟ್ಟಾಗ ನನಗೆ ಆದ ನೋವು ಇದೀಗ ಮತ್ತೆ ಎದುರಾಗಿದೆ” ಎಂದು ಭಾವುಕರಾದರು.

ಇಲ್ಲಿನ ಜನರು ಕೇವಲ ಒಬ್ಬ ತಂದೆಯನ್ನು ಮಾತ್ರವಲ್ಲ, ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ತಾವು ಗೌರವಿಸುವ ಹಾಗೂ ಪ್ರೀತಿ ಪಾತ್ರರಾಗಿದ್ದ ಜನರನ್ನೇ ಇಲ್ಲಿನವರು ಕಳೆದುಕೊಂಡಿದ್ಧಾರೆ. ಇದೀಗ ಇಡೀ ದೇಶದ ಗಮನ ವಯನಾಡಿನತ್ತ ಇದೆ ಎಂದು ಹೇಳಿದರು.

ಇಲ್ಲಿನ ಪರಿಸ್ಥಿತಿ ನೋಡಲು ನಾವು ಬಂದಿದ್ದೇವೆ. ಇಲ್ಲಿನ ಜನರ ಸಂಕಷ್ಟದ ಸನ್ನಿವೇಶ ನೋಡಿ ಬಹಳ ನೋವಾಗುತ್ತಿದೆ. ತಮ್ಮ ಮನೆ ಹಾಗೂ ಕುಟುಂಬ ಸದಸ್ಯರನ್ನೇ ಕಳೆದುಕೊಂಡು ಜನ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸೂಕ್ತ ಪರಿಹಾರ ಸಿಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ದುರಂತವು ಅಗಾಧವಾಗಿದೆ ಮತ್ತು ವಯನಾಡನ್ನು ಗುಣಪಡಿಸಲು ಅಗತ್ಯವಾದ ಕೆಲಸವು ನಡೆಯಬೇಕಾಗಿದೆ. ಈಗ ರಾಜಕೀಯದ ಸಮಯವಲ್ಲ. ಈ ಸಂಕಷ್ಟದ ಸಮಯದಲ್ಲಿ ಇಡೀ ದೇಶವೇ ವಯನಾಡಿನೊಂದಿಗೆ ನಿಂತಿದೆ. ಜನರನ್ನು ಬೆಂಬಲಿಸಲು ಅಗತ್ಯವಿರುವ ಎಲ್ಲಾ ನೆರವು ನೀಡಲು ನಾವು ಒಗ್ಗೂಡಬೇಕು ಮತ್ತು ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ನಂತರ ಘಟನಾ ಸ್ಥಳದಲ್ಲಿ ಹಗಲು – ರಾತ್ರಿ ಎನ್ನದೆ ದಿನವಿಡೀ ಶ್ರಮಿಸುತ್ತಿರುವ ವೈದ್ಯರು, ನರ್ಸ್‌ಗಳು, ಜಿಲ್ಲಾಡಳಿತ, ಸ್ವಯಂ ಸೇವಕರು ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದರು.

ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

5 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago