ವಯನಾಡ್ ನಲ್ಲಿ ಭಾರೀ ದುರಂತ – ತಡರಾತ್ರಿ ಭೂಕುಸಿತ: 5 ಸಾವು: 400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಕೇರಳದ ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಐವರ ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹದೆಂದು ಶಂಕಿಸಲಾಗುತ್ತಿದೆ.

ದುರಂತದಲ್ಲಿ ಹಲವು ವಾಹನಗಳು ಕೊಚ್ಚಿ ಹೋಗಿವೆ. ಚುರಲ್ಮಲಾ ಪಟ್ಟಣದ ಒಂದು ಭಾಗ ಕೊಚ್ಚಿ ಹೋಗಿದೆ. ಭೂಕುಸಿತದ ನಂತರ ಗುಡ್ಡದ ಪ್ರವಾಹದಲ್ಲಿ ಹಲವು ಮನೆಗಳು ನಾಶವಾಗಿವೆ. ವೆಲ್ಲರ್ಮಲಾ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಭೂಕುಸಿತದಿಂದ ಭಾರೀ ಹಾನಿಯಾಗಿದೆ. ವಯನಾಡು ಮೆಪ್ಪಾಡಿ ಮುಂಡಕ್ಕೆ ಪ್ರದೇಶದಲ್ಲಿ ಇಷ್ಟು ದೊಡ್ಡ ಅನಾಹುತ ಈ ಹಿಂದೆ ಸಂಭವಿಸಿರಲಿಲ್ಲ.

ಮುಂಡಕೈಯಲ್ಲಿ ಬೆಳಗಿನ ಜಾವ ಒಂದು ಗಂಟೆಗೆ ಮತ್ತು ನಂತರ ಬೆಳಗಿನ ಜಾವ ನಾಲ್ಕು ಗಂಟೆಗೆ ಎರಡು ಬಾರಿ ಭೂಕುಸಿತ ಸಂಭವಿಸಿದೆ. ಮಧ್ಯರಾತ್ರಿ ಭೂಕುಸಿತದ ನಂತರ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಮತ್ತೊಂದು ಭೂಕುಸಿತ ಸಂಭವಿಸಿದೆ 400 ಕ್ಕೂ ಹೆಚ್ಚು ಕುಟುಂಬಗಳು ಭೂಕುಸಿತದಿಂದ ಹಾನಿಗೊಳಗಾದವು. ಹಲವರು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಲವು ಮಂದಿ ನಾಪತ್ತೆಯಾಗಿರುವುದರಿಂದ ಕುಟುಂಬಸ್ಥರಿಂದ ಸಹಾಯಕ್ಕಾಗಿ ಮನವಿಗಳೂ ಬರುತ್ತಿವೆ. ನಾಪತ್ತೆಯಾದವರ ಪತ್ತೆ ಕಾರ್ಯ ಮುಂದುವರಿದಿದ್ದು, ಕಂದಾಯ ಸಚಿವ ಕೆ.ರಾಜನ್, ಸಚಿವ ಒ.ಆ‌ರ್.ಕೇಲು ಮತ್ತಿತರರು ವಯನಾಡಿಗೆ ಮರಳಿದ್ದಾರೆ..

ಎನ್‌ಡಿಆರ್‌ಎಫ್‌ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ. ಏತನ್ಮಧ್ಯೆ ಅನಾಹುತದ ನಿಖರ ಚಿತ್ರಣ ಇನ್ನಷ್ಟೇ ಸಿಗಬೇಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಂದಾಯ ಸಚಿವ ಕೆ.ರಾಜನ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಪಘಾತದಲ್ಲಿ 16 ಮಂದಿ ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೇತುವೆ ಕುಸಿದು ಬಿದ್ದಿರುವುದರಿಂದ ಅಟ್ಟಮಲ, ಚುರಲ್ಮಳಕ್ಕೆ ತೆರಳಲು ಜನರು ಪರದಾಡುವಂತಾಗಿದೆ. ಅಟ್ಟಮಲ ಮತ್ತು ಚುರಲ್‌ಮಳದ ಜನರನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಕೊನೆ ಕ್ಷಣದಲ್ಲಿ ಲಭಿಸಿದ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ.ಅನೇಕ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ಚೂರಲ್ಮಾಲಾದಿಂದ ಮುಂಡಕೈಗೆ ಹೋಗುವ ರಸ್ತೆ ಕೊಚ್ಚಿಹೋಗಿದ್ದು, ರಕ್ಷಣಾ ಪ್ರಯತ್ನಗಳಿಗೆ ತೀವ್ರ ಅಡ್ಡಿಯಾಗಿದೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago