ವರಕವಿ ದ.ರಾ.ಬೇಂದ್ರೆ ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು- ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

ವರಕವಿ ದ.ರಾ.ಬೇಂದ್ರೆ ಅವರು ಜನಸಾಮಾನ್ಯರ ನೋವು-ನಲಿವುಗಳನ್ನು, ಚೆಲುವು-ಒಲವುಗಳನ್ನು ತಮ್ಮ  ಕವನಗಳಲ್ಲಿ ಮೂಡಿಸಿದರು. ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ಕಾರ್ಯಾಲಯದಲ್ಲಿ ನಡೆದ ವರಕವಿ ದ.ರಾ.ಬೇಂದ್ರೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಭಾಷೆಯ ಪದ ಸಂಪತ್ತು ಮತ್ತು ನಾದ ಸಂಪತ್ತು ಎರಡನ್ನೂ ಬಳಸುವ ಮೂಲಕ  ಬೇಂದ್ರೆಯವರ ತಮ್ಮ ಕಾವ್ಯಗುಣದ ಸತ್ವವನ್ನು  ಉನ್ನತಮಟ್ಟಕ್ಕೆ ಏರಿಸಿದವರು. ಇಂದರಿಂದಾಗಿ    ಬೇಂದ್ರೆಯವರ ಕವಿತೆಗಳು ಸಹೃದಯರ ಮನಸ್ಸನ್ನು ಆರ್ಕಷಣೆಗೊಳಿಸಿವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ದ.ರಾ.ಬೇಂದ್ರೆ ಅವರು ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ತನಕ ಎಲ್ಲಾ ವಿಚಾರಗಳನ್ನು ಕವಿತೆಗಳಲ್ಲಿ  ತಂದಿದ್ದಾರೆ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ ಹೊಸತನ ನೀಡಿದರು ಎಂದರು.

ನಾಗದಳ ಸಂಘಟನೆಯ ನಟರಾಜು ಮಾತನಾಡಿ, ಬೇಂದ್ರೆ ಅವರ ಕಾವ್ಯದಲ್ಲಿ ದೇಸಿ ಸೊಗಡು, ಪ್ರಕೃತಿ, ಆಧ್ಯಾತ್ಮಿಕತೆಯ ಜೊತೆಗೆ ಸಾಮಾನ್ಯ ಮನುಷ್ಯ ಜೀವನದ ಸಾಮಾಜಿಕ ವ್ಯವಸ್ಥೆಯ ವಿವಿಧ ಆಯಾಮಗಳನ್ನು ತಮ್ಮ ಕಾವ್ಯದ ಮೂಲಕ ಬಿಂಬಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು,    ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಪೀರ್, ಕೋದಂಡರಾಮ್,  ಎ.ಅಣ್ಣಯ್ಯ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಪತ್ರಕರ್ತ ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

3 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago