Categories: ಕೋಲಾರ

ವರದಕ್ಷಿಣೆ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ: ಪತಿ ಮನೆ ಪಕ್ಕದಲ್ಲೇ ಅಂತ್ಯಸಂಸ್ಕಾರ

ಕೋಲಾರ: ನಗರ ಹೊರವಲಯದ ಸಹಕಾರ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ನವ ವಿವಾಹಿತೆ ಮಾನಸಾ (24) ಅವರ ಪೋಷಕರು, ಭಾನುವಾರ ಅಳಿಯನ ಮನೆ ಮುಂದೆ ಪುತ್ರಿಯ ಶವವಿಟ್ಟು ಪ್ರತಿಭಟನೆ ನಡೆಸಿದರು.

ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದಿಂದಲೇ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿದರು. ಮಾನಸಾ ಪತಿ ಉಲ್ಲಾಸ್‍ಗೌಡ ಅವರ ತುರಾಂಡಹಳ್ಳಿ ಗ್ರಾಮದ ನಿವಾಸದ ಮುಂದಿನ ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಲು ಮುಂದಾದರು. ಆಗ ಅವರನ್ನು ತಡೆದ ಪೊಲೀಸರು, ನ್ಯಾಯ ಕೊಡಿಸುವ ಭರವಸೆ ನೀಡಿದರು.

ಬಳಿಕ ಪತಿ ಮನೆಯ ಪಕ್ಕದಲ್ಲಿನ ಕೈತೋಟದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪತಿ ಹಾಗೂ ಅವರು ಕುಟುಂಬದವರು ಇರಲಿಲ್ಲ. ಒಂದು ವರ್ಷದ ಹಿಂದೆ ಮಾನಸಾ ಹಾಗೂ ಉಲ್ಲಾಸ್‍ಗೌಡ ವಿವಾಹವಾಗಿದ್ದರು. ಅವರು ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ದರು.

ವರದಕ್ಷಿಣೆ ಹಾಗೂ ಮಾನಸಿಕ ಕಿರುಕುಳದ ದೂರು ಬಂದಾಗ ಹಿರಿಯರು ಹಲವರು ಬಾರಿ ರಾಜಿ ಸಂಧಾನ ನಡೆಸಿದ್ದರು. ಆನಂತರ ಪತಿ ಕುಟುಂಬದವರು ಮಾನಸಾ ಅವರನ್ನು ತವರು ಮನೆಗೆ ಕಳುಹಿಸಿದ್ದರು ಎನ್ನಲಾಗಿದೆ. ವಿಚ್ಚೇದನ ಪಡೆದುಕೊಳ್ಳುವ ಉದ್ದೇಶದಿಂದ ವಕೀಲರ ಕಡೆಯಿಂದ ನೋಟಿಸ್ ಕೂಡ ಬಂದಿತ್ತು ಎಂಬುದು ಗೊತ್ತಾಗಿದೆ.

ಕೌಟುಂಬಿಕ ಕಲಹದಿಂದ ಬೇಸತ್ತು ಮಾನಸಾ, ಶನಿವಾರ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ನನ್ನ ಸಾವಿಗೆ ಯಾರೂ ಕಾರಣರಲ್ಲ, ನನ್ನ ಜೀವನ ಉಲ್ಲಾಸ್ ಕುಟುಂಬದಿಂದ ಮುಗಿದಿದೆ. ದಯವಿಟ್ಟು ನನ್ನ ಒಡವೆಯನ್ನು ನನ್ನ ಮನೆಗೆ ವಾಪಸ್ ಮಾಡಿ, ಧನ್ಯವಾದಗಳು’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ, ಕೋಲಾರ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಕಾಂತರಾಜ್‌ ಹಾಗೂ ಪಿಎಸ್‌ಐ ವಿ.ಭಾರತಿ ಘಟನಾ ಸ್ಥಳಕ್ಕೆ ‌ಭೇಟಿ ನೀಡಿ ಪರಿಶೀಲಿಸಿದ್ದಾರೆ.

‘ಮಾನಸಾ ಎಂಬ ವಿವಾಹಿತೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣಿ ಕಿರುಕುಳದಿಂದ ಸಾವು ಸಂಭವಿಸಿರುವ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪತಿ ಉಲ್ಲಾಸ್‌, ಅವರ ಅಪ್ಪ, ಅಮ್ಮ ಹಾಗೂ ಅವರ ಮಾವಂದಿರು ಸೇರಿದಂತೆ ಐವರ ಮೇಲೆ ದೂರು ನೀಡಿದ್ದಾರೆ. ಈ ವಿಚಾರವಾಗಿ ತಂಡ ರಚಿಸಿ ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದೇವೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ನಡೆಸಿ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ತಿಳಿಸಿದರು.

ಪತಿ ಮನೆ ಮುಂದೆ ಯುವತಿಯ ಪೋಷಕರು ಪ್ರತಿಭಟನೆ ನಡೆಸಿರುವ ಸಂಬಂಧ ಪ್ರತಿಕ್ರಿಯಿಸಿ, ‘ಇದು ಕುಟುಂಬದ  ವೈಯಕ್ತಿಕ ವಿಚಾರ. ಮನವೊಲಿಸಿ ಅಂತ್ಯಕ್ರಿಯೆ ನಡೆಸಲಾಗಿದೆ. ಅವರಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದೇವೆ’ ಎಂದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

60 minutes ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

2 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

3 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

6 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

6 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

17 hours ago