ವಧು ವರರಿಗೆ ವಿಶ್ ಮಾಡುವ ನೆಪದಲ್ಲಿ ಸ್ಟೇಜ್ ಮೇಲೆ ಬಂದಂತಹ ವಧುವಿನ ಮಾಜಿ ಪ್ರಿಯಕರ ಇದ್ದಕ್ಕಿದ್ದಂತೆ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನ್ ಚಿತ್ತೋರ್‌ಗಢ ಜಿಲ್ಲೆಯ ಭಿಲ್ವಾರದಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಅದೃಷ್ಟವಶಾತ್ ವರನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಹಲ್ಲೆ ನಡೆಸಿರುವ ಆರೋಪಿ ಶಂಕರ್ ಲಾಲ್‌ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ವಧು ಮತ್ತು ಶಂಕರ್ ಲಾಲ್ ಎರಡು ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಇವರಿಬ್ಬರ ಮಧ್ಯೆ ಗೆಳೆತನ ಬೆಳೆದಿದೆ. ನಂತರ ಇವರಿಬ್ಬರ ನಡುವೆ ಬ್ರೇಕಪ್ ಆಗಿದ್ದು, ಇದೇ ಸೇಡಿನಿಂದ ಶಂಕರ್ ಲಲ್ ಮಾಜಿ ಗೆಳತಿಯ ಮದುವೆಗೆ ಬಂದು ವರನ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…