ವರಮಹಾಲಕ್ಷ್ಮೀ ಹಬ್ಬ: ಕೆರೆಯಲ್ಲಿ ತಾವರೆ ಹೂ ಕೀಳಲು ಹೋದ ವ್ಯಕ್ತಿ ನೀರು ಪಾಲು

ವರಮಹಾಲಕ್ಷ್ಮೀ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ-ಹೊಸಹಳ್ಳಿ ಕೆರೆಯಲ್ಲಿ ನಡೆದಿದೆ.

ಗೋವೇನಹಳ್ಳಿಯ ಮರಿಗಂಗಯ್ಯ (45) ಮೃತ ವ್ಯಕ್ತಿ.

ಮೃತದೇಹ ಹುಡುಕಿ ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು, ಸ್ಥಳೀಯರ ನೆರವು ಪಡೆದು ಅಂತಿಮವಾಗಿ ಮೃತ ದೇಹ ಹೊರತೆಗಿದಿದ್ದಾರೆ.

ಬಿಲ್ಲಿನಕೋಟೆ ಗ್ರಾಮದ ಈಜು ಪಟು ಸಿದ್ದಲಿಂಗಯ್ಯ ಎಂಬುವರ ಸಹಕಾರದಿಂದ ಶವ ಪತ್ತೆಯಾಯಿತು. ನೆಲಮಂಗಲ ಅಗ್ನಿಶಾಮಕ ಠಾಣೆ ಎಲ್ಲಾ ಪರಿಕರಗಳಿಂದ ಸಶಕ್ತವಾಗಬೇಕು, ತುಮಕೂರು ಅಗ್ನಿ ಶಾಮಕ ಠಾಣೆಯನ್ನು ಅವಲಂಬಿಸುವುದನ್ನು ಬಿಡಬೇಕು, ರ್ದುಘಟನೆಗಳಾದಾಗ ಸೂಕ್ತ ಪರಿಕರಗಳಿಂದ ಕಾರ್ಯಾಚರಣೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

14 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago