ವರುಣನ ಕೃಪೆಯಿಂದ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್

ಮೊಹಲಿ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವೆ ನಡೆದ ಪಂದ್ಯ ಅತ್ಯಂತ ಪೈಪೋಟಿಯಿಂದ ಕೂಡಿದ್ದರೂ ಸಹ ಕಿಂಗ್ಸ್ ಇಲೆವೆನ್ ಪಂಜಾಬ್ ವರುಣನ ಕೃಪೆಯಿಂದ ಟೂರ್ನಿಯ ಮೊದಲ ಗೆಲುವು ಪಡೆದರು.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣ ಎದುರಾಳಿಗಳನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಇದರ ಲಾಭ ಪಡೆದ ಶಿಖರ್ ಧವನ್ ಪಡೆ ಉತ್ತಮ ಪ್ರದರ್ಶನ ನೀಡಿದರು.

ಆರಂಭಿಕ ಜೋಡಿ ಶಿಖರ್ ಧವನ್ (40) ಹಾಗೂ ಪ್ರಬಾ ಸಿಮ್ರಾನ್ (23) ರನ್ ಗಳಿಸಿ ಭದ್ರ ಬುನಾದಿ ಹಾಕಿದರು, ನಂತರ ಬಂದ ಭಾನುಕಾ ರಾಜಪಕ್ಷ (50) ಬಿರುಸಿನ ಬ್ಯಾಟಿಂಗ್ ನೆರವಿನಿಂದ ತಂಡದ ಮೊತ್ತ 191 ರನ್ ಗಳಿಸಿದರು, ಸ್ಟಾರ್ ಆಲ್ ರೌಂಡರ್ ಸ್ಯಾಮ್ ಕರನ್(26) ಹಾಗೂ ಜಿತೇಶ್ ಶರ್ಮಾ(21) ರನ್ ಕಲೆಹಾಕಿ ತಂಡಕ್ಕೆ ನೆರವಾದರು.

ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಮಂದಿಪ್ ಸಿಂಗ್ (2) ಗಳಿಸಿದ್ದಾಗ ವೇಗದ ಬೌಲರ್ ಅಶ೯ದೀಪ್ ಸಿಂಗ್ ಅವರಿಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಅಂಕುಲ್ ರಾಯ್ (4) ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರು.

ನಂತರ ಜೊತೆಯಾದ ಗುಬಾ೯ಜ್(22) ಹಾಗೂ ವೆಂಕಟೇಶ್ ಅಯ್ಯರ್ (34) ಮತ್ತು ನಾಯಕ ನಿತೀಶ್ ರಾಣ (24) ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು, ನಂತರ ಬಂದ ಸ್ಟಾರ್ ಆಲ್ ರೌಂಡರ್ ರಸೇಲ್ ಭರ್ಜರಿ ಬ್ಯಾಟಿಂಗ್ (35) ರನ್ ಗಳಿಸಿ ಗೆಲುವಿನ ದಡ ಸೇರಿಸುವ ಸಮಯದಲ್ಲಿ ಸ್ಯಾಮ್ ಕರನ್ ಅವರಿಗೆ ವಿಕೆಟ್ ಒಪ್ಪಿಸಿದರು.

ಈ ಸಂದರ್ಭದಲ್ಲಿ ವರುಣನ ಆರ್ಭಟದಿಂದಾಗಿ ಪಂದ್ಯವನ್ನು ಮುಂದುವರಿಸಲು ಅಂಪೈರ್ ಗಳು ನಿರಾಕರಿಸಿದಾಗ ಡಕ್ವಥ್೯ ಲೂಯಿಸ್ ನಿಯಮದ ಪ್ರಕಾರ ಕಿಂಗ್ಸ್ ಇಲೆವೆನ್ ಪಂಜಾಬ್ 7 ರನ್ ಗೆಲುವು ಪಡೆದರು, ಪಂಜಾಬ್ ಪರವಾಗಿ ಅಶ೯ದೀಪ್ ಸಿಂಗ್ 3 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

5 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago