ವರ್ಷದೊಳಗೆ ಮುದುಗುರ್ಕಿಗೆ ವ್ಯವಸ್ಥಿತ ರಸ್ತೆ ಸಂಪರ್ಕ- ಸಚಿವ ಕೆ.ಎಚ್.ಮುನಿಯಪ್ಪ

ಮೇ.6ರ ರಾತ್ರಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್ ಅಂಡ್ ರನ್ ಗೆ ದೇವನಹಳ್ಳಿ ತಾಲೂಕಿನ ಮುದುಗುರ್ಕಿ ಗ್ರಾಮದ ವ್ಯಕ್ತಿ ಸುಧಾಕರ್(35) ಸಾವನ್ನಪ್ಪಿದ್ದು, ಈ ಹಿನ್ನೆಲೆ ಸತತವಾಗಿ ಅಪಘಾತಗಳಿಂದ ನಲುಗಿಹೋಗಿರುವ ಗ್ರಾಮಸ್ಥರಿಂದ ಮೇ.7ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಇಟ್ಟು ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ದೇವನಹಳ್ಳಿಯ ಮುದುಗುರ್ಕಿ ಗ್ರಾಮಕ್ಕೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಭೇಟಿ ನೀಡಿ ಅಪಘಾತದಿಂದ ಸಾವನಪ್ಪಿದ ಮೃತ ಸುಧಾಕರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಘಟನಾ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಸ್ಥಳದಲ್ಲಿ ಈ ಹಿಂದೆ ಅನೇಕ ಅಪಘಾತಗಳಲ್ಲಿ ಹಲವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಂಡರ್ ಪಾಸ್ (ಕೆಳಸೇತುವೆ)ಗೆ ಆಗ್ರಹಿಸಿದ ಆ ಭಾಗದ ಮುಖಂಡರು, ಸಾರ್ವಜನಿಕರು ಸಮಸ್ಯೆ ಇತ್ಯರ್ಥಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವರಾದ ಕೆ.ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಸಚಿವರು, ಮುದಗುರ್ಕಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ,ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದು ತಿಳಿಸಿದರು.

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆಂಧ್ರದ ಪೆನುಗೊಂಡ ವರಗೆ 2400 ಕೋಟಿ ರೂ. ವೆಚ್ಚದಲ್ಲಿ 10 ಪಥದ ರಸ್ತೆ ನಿರ್ಮಾಣ ಮಾರ್ಚ್ ನಿಂದ ಆರಂಭಗೊಳ್ಳುತಿದ್ದು, ಎಲ್ಲಾ ಪ್ರಮುಖ ಗ್ರಾಮಗಳಲ್ಲಿ ಬೆಂಗಳೂರು ಮೈಸೂರು ಹೈವೇ ಮಾದರಿಯಲ್ಲಿ ಅಂಡರ್ ಪಾಸ್ ಗಳು ಆಗಲಿದ್ದು ಶಾಶ್ವತ ಪರಿಹಾರ ಸಿಗಲಿದೆ ಎಂದರು.

ತಕ್ಷಣದ ಕ್ರಮವಾಗಿ ಮುದುಗುರ್ಕಿಯಿಂದ ಆವತಿವರಗೆ ರಸ್ತೆ ಬದಿಯಲ್ಲಿ ಲಾರಿ ಸೇರಿದಂತೆ ಇತರೆ ವಾಹನಗಳ ನಿಲುಗಡೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗುವುದು. ಕಾನೂನಿನ ಪ್ರಕಾರ ರಸ್ತೆಯನ್ನು ಈ ರೀತಿ ತೆರವು ಮಾಡಲು ಅವಕಾಶವಿಲ್ಲ,‌ ತಾತ್ಕಾಲಿಕವಾಗಿ ಟ್ರಾಫಿಕ್ ಪೊಲೀಸ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲಿದ್ದಾರೆ ಎಂದರು. ಹಾಗೂ ಹೈಮಾಸ್ಟ್ ದೀಪಕ್ಕೂ ವ್ಯವಸ್ಥೆ ಮಾಡಲು ಸೂಚಿಸಲಾಗುವುದೆಂದರು.

ಹತ್ತು ಪಥದ ರಸ್ತೆ ನಿರ್ಮಾಣ ಆಗಲಿದೆ. ಆಗ ಪ್ರತಿಯೊಂದು ಹಳ್ಳಿಗಳಿಗೂ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ. ಅಲ್ಲಿಯವರಗೆ ತಾತ್ಕಾಲಿಕ ಪರಿಹಾರ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಯಾವುದೇ ವಾಹನಗಳನ್ನ ನಿಲ್ಲಿಸದಂತೆ ಪೊಲೀಸರಿಗೆ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಜಯಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ ಉಪಾಧ್ಯಕ್ಷ ನಾರಾಯಣ ಸ್ವಾಮಿ, ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 hour ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

14 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

17 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

19 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

22 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

23 hours ago